ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಐದಾರು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ನೆರೆ ಸಮಸ್ಯೆಗೆ ತುತ್ತಾಗಿದ್ದ ಬೈಂದೂರು ತಾಲೂಕಿನ ನಾವುಂದ ಗ್ರಾಮದ ಸಾಲ್ಬುಇಡ ಪ್ರದೇಶದ ಸಂತ್ರಸ್ತ ಜನರಿಗೆ ಆಹಾರ ಸಾಮಾಗ್ರಿ ಕಿಟ್ ವಿತರಿಸಲಾಯಿತು.

ಈ ಸಂದರ್ಭ ಮಾತಾಡಿದ ಡಿಸಿ ಕೂರ್ಮಾ ರಾವ್, ಅಧಿಕಾರಿಗಳ ತಂಡ ಶೀಘ್ರವೇ ಬೆಳೆ ಸಮೀಕ್ಷೆ ನಡೆಸಲಿದ್ದು ಅಗತ್ಯ ಪರಿಹಾರ ನೀಡಲಾಗುತ್ತದೆ. ಮನೆ ಹಾನಿಗೆ ಸಂಬಂಧಿಸಿದಂತೆಯೂ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ. ದೋಣಿ ಸಹಿತ ಅಗತ್ಯ ಮುಂಜಾಗೃತೆ ವಹಿಸಲು ಸ್ಥಳೀಯರು ಉತ್ತಮವಾಗಿ ಸಹಕರಿಸಿದ್ದಾರೆ ಎಂದರು..
ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿಯವರ ವೈಯಕ್ತಿಕ ಖರ್ಚಿನಲ್ಲಿ ನೂರಕ್ಕೂ ಅಧಿಕ ಕಿಟ್ ವಿತರಣೆ ನಡೆದಿದ್ದು ಜಿಲ್ಲಾಧಿಕಾರಿ ಕೂರ್ಮಾರಾವ್, ಸಿಇಒ ಪ್ರಸನ್ನ ಎಚ್, ಬೈಂದೂರು ತಹಶಿಲ್ದಾರ್ ಕಿರಣ ಗೌರಯ್ಯ, ಬೈಂದೂರು ಸರ್ಕಲ್ ಇನ್ಸ್‌ಪೆಕ್ಟರ್ ಸಂತೋಷ್ ಕಾಯ್ಕಿಣಿ, ಕಂದಾಯ ನಿರೀಕ್ಷಕ ಮಂಜುನಾಥ್, ಉಪತಹಶೀಲ್ದಾರ್ ಭೀಮಪ್ಪ,
ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಗ್ರಾಮ ಪಂಚಾಯತ್ ರಾಜೇಶ್, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಶ್ಯಾಮಲಾ ಕುಂದರ್ ಹಾಗೂ ಅಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.











