ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ /ಸಿ ಎಸ್ ಕಾರ್ಯಾಗಾರ .

0
668

Click Here

Click Here

ಕುಂದಾಪುರ ಮಿರರ್ ಸುದ್ದಿ

ಕುಂದಾಪುರ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿ ಎ /ಸಿ ಎಸ್ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ತ್ರಿಷಾ ಕಾಲೇಜಿನ ಸಂಸ್ಥಾಪಕರು ಹಾಗೂ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಆಗಿರುವ CA ಗೋಪಾಲ ಕೃಷ್ಣ ಭಟ್ ವಿದ್ಯಾರ್ಥಿಗಳಿಗೆ CA/CS ಕೋರ್ಸ್ ನ ಹಂತಗಳು, ಅವಧಿ ಮತ್ತು ಅವಕಾಶ ಗಳನ್ನು ಕುರಿತು ಸಂಪೂರ್ಣ ಮಾಹಿತಿ ನೀಡಿ, CA /CS ಹೊರತು ಪಡಿಸಿ ಪಿಯುಸಿ ನಂತರದ ವಿವಿಧ ಕೋರ್ಸ್ ಗಳ ಕುರಿತು ಸವಿವರವಾಗಿ ಮಾಹಿತಿ ನೀಡಿದರು.

Click Here

ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಕಾರ್ಯಕ್ರಮದ ಅಧ್ಯಕ್ಷ ವಹಿಸಿಕೊಂಡಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅರ್ಥಶಾಸ್ತ್ರ ಉಪನ್ಯಾಸಕಿ ಶಿವರಂಜನಿ ಸ್ವಾಗತಿಸಿ, ವಾಣಿಜ್ಯ ಉಪನ್ಯಾಸಕಿಯರಾದ ನಿಧಿ ವಂದಿಸಿ, ವಿನಯಾ ಪರಿಚಯಿಸಿ, ವಾಣಿಜ್ಯ ಉಪನ್ಯಾಸಕ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here