ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಇಲ್ಲಿನ ಚರ್ಚ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ಶೂಟ್‌ಔಟ್ ನಡೆದಿದ್ದು ಪ್ರಕರಣದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್(42) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಸುಮಾರು 3.30 ಗಂಟೆ ವೇಳೆಗೆ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಪ್ರಾಥಮಿಕ ತನಿಖೆಯಲ್ಲಿ ಗುಂಡಿನ ದಾಳಿಯಿಂದ ವ್ಯಕ್ತಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಮಾಹಿತಿ ಪಡೆದ ಕುಂದಾಪುರ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಯ ವಿವರ
ಶುಕ್ರವಾರ ಮುಂಜಾನೆ ಮಹಿಳೆಯೊಂದಿಗೆ ಕಾರಿನಲ್ಲಿ ಬಂದಿದ್ದಾಗ ಕುಂದಾಪುರ ಚರ್ಚ್ ಎದುರಿಗೆ ಈ ಘಟನೆ ನಡೆದಿದೆ. ಪಿಸ್ತೂಲ್ ಮೂಲಕ ಆರೋಪಿ ಗುಂಡು ಹೊಡೆದು ಪರಾರಿಯಾಗಿದ್ದು ತೀವ್ರ ರಕ್ತಸ್ರಾವದಿಂದ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹಿಳೆ ಆರೋಪಿಯನ್ನು ಗುರುತು ಹಚ್ಚಿದ್ದು ಪರಾರಿಯಾದ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಘಟನಾ ಸ್ಥಳದಲ್ಲಿ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಪರಿಶೀಲನೆ ಆರಂಭಿಸಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.












