ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಯಶಸ್ವಿ ಪೋಷಕ-ಶಿಕ್ಷಕರ ಸಭೆ

0
14

Click Here

Click Here

ವಿದ್ಯಾರ್ಥಿಗಳಲ್ಲಿ ಸ್ಪಷ್ಟ ಗುರಿ, ಶಿಸ್ತು ಅಗತ್ಯ– ಡಾ. ರಮೇಶ್ ಶೆಟ್ಟಿ ಕರೆ

ಕುಂದಾಪುರ ಮಿರರ್ ಸುದ್ದಿ…
ಬಾರ್ಕೂರು: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಶಿಸ್ತು, ವೈಯಕ್ತಿಕ ಬೆಳವಣಿಗೆ ಹಾಗೂ ಭವಿಷ್ಯದ ಗುರಿಗಳ ಕುರಿತು ಚರ್ಚಿಸುವ ಮಹತ್ವದ ಉದ್ದೇಶದೊಂದಿಗೆ ಬಾರ್ಕೂರಿನ ಸುಜ್ಞಾನ ನ್ಯಾಷನಲ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪೋಷಕ-ಶಿಕ್ಷಕರ ಸಭೆಯು ಅತ್ಯಂತ ಯಶಸ್ವಿಯಾಗಿ ನೆರವೇರಿತು.

ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ನಡೆದ ಸಭೆಯಲ್ಲಿ ವಿದ್ಯಾರ್ಥಿಗಳ ಹಾಜರಾತಿ, ಕಲಿಕಾ ಪ್ರಗತಿ, ವೈಯಕ್ತಿಕ ಸಾಮರ್ಥ್ಯ ಹಾಗೂ ಶೈಕ್ಷಣಿಕ ಗುರಿಗಳ ಕುರಿತು ಪೋಷಕರು ಮತ್ತು ಶಿಕ್ಷಕರ ನಡುವೆ ಅರ್ಥಪೂರ್ಣ ವಿಚಾರ ವಿನಿಮಯ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, “ಶಿಸ್ತು ಜೀವನಕ್ಕೆ ಸರಿಯಾದ ದಾರಿ ತೋರಿಸಿದರೆ, ಹೊಂದಾಣಿಕೆಯು ಜೀವನವನ್ನು ಸುಂದರಗೊಳಿಸುತ್ತದೆ. ಶಿಸ್ತು ಮತ್ತು ಹೊಂದಾಣಿಕೆಗಳು ಉತ್ತಮ ಸಂಬಂಧಗಳನ್ನು ಕಟ್ಟುವ ಸೇತುವೆಯಾಗಿದ್ದು, ವಿದ್ಯಾರ್ಥಿಗಳು ಸ್ಪಷ್ಟ ಗುರಿ ರೂಪಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಬೇಕು,” ಎಂದು ಕರೆ ನೀಡಿದರು.

Click Here

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಟ್ರಸ್ಟ್‌ನ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ,”ಸಾಧನೆಯ ಹಾದಿಯಲ್ಲಿ ಅಸಾಧ್ಯವೆಂಬುದು ಯಾವುದೂ ಇಲ್ಲ. ಯಶಸ್ಸಿಗೆ ದೃಢಸಂಕಲ್ಪ, ಪ್ರಾಮಾಣಿಕ ಪ್ರಯತ್ನ ಹಾಗೂ ನಿರಂತರ ಪರಿಶ್ರಮ ಮುಖ್ಯ. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ನಂಬಿ ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು,” ಎಂದು ಪ್ರೇರೇಪಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಆಚಾರ್ಯ ಅವರು ಸ್ಫೂರ್ತಿದಾಯಕ ಕಥೆಯ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸತತ ಪ್ರಯತ್ನ ಹಾಗೂ ಸೋಲಿನಿಂದ ಕಲಿಯುವ ಮನೋಭಾವದ ಅಗತ್ಯವನ್ನು ಪ್ರತಿಪಾದಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಯ ಕಲಿಕಾ ಅಗತ್ಯಗಳನ್ನು ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡುವುದು ಸಂಸ್ಥೆಯ ಮೊದಲ ಆದ್ಯತೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಪೋಷಕರು ಶಿಕ್ಷಕರೊಂದಿಗೆ ನೇರವಾಗಿ ಸಂವಾದ ನಡೆಸಿ, ತಮ್ಮ ಮಕ್ಕಳ ಶೈಕ್ಷಣಿಕ ಬೆಳವಣಿಗೆ ಹಾಗೂ ಸುಧಾರಿಸಬೇಕಾದ ಕ್ಷೇತ್ರಗಳ ಕುರಿತು ಮಾಹಿತಿ ಪಡೆದುಕೊಂಡರು. ಈ ಸಭೆಯ ಪ್ರಮುಖ ಆಕರ್ಷಣೆಯೆಂದರೆ ಎರಡೂ ದಿನಗಳಲ್ಲಿ ಶೇಕಡಾ 100 ರಷ್ಟು ಪೋಷಕರು ಭಾಗವಹಿಸಿರುವುದು. ಇದು ಸಂಸ್ಥೆಯ ಮೇಲಿರುವ ಪೋಷಕರ ನಂಬಿಕೆ ಹಾಗೂ ಮಕ್ಕಳ ಭವಿಷ್ಯದ ಬಗೆಗಿನ ಕಾಳಜಿಗೆ ಸಾಕ್ಷಿಯಾಯಿತು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ತನುಜಾ ಮತ್ತು ವಿಜಯಲಕ್ಷ್ಮಿ ಸ್ವಾಗತಿಸಿದರು. ನೈನಾ ಜೆ. ಶೆಟ್ಟಿ ಅಚ್ಚುಕಟ್ಟಾಗಿ ಕಾರ್ಯಕ್ರಮ ನಿರೂಪಿಸಿದರೆ, ಸಹನಾ ಮತ್ತು ತನ್ವಿ ಧನ್ಯವಾದ ಸಮರ್ಪಿಸಿದರು.
Bharath Shetty

Click Here

LEAVE A REPLY

Please enter your comment!
Please enter your name here