ಕೋಟದ ಹರ್ತಟ್ಟು ನವೋದಯ ಫ್ರೆಂಡ್ಸ್ 80ನೇ ಸ್ವಾತಂತ್ರ್ಯೋತ್ಸವಕ್ಕೆ ಬಸ್ ತಂಗುದಾಣ ಕೊಡುಗೆ

0
32

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕೋಟ: ಇಲ್ಲಿನ ಕೋಟದ ಹರ್ತಟ್ಟು ನವೋದಯ ಫ್ರೆಂಡ್ಸ್ ಇದರ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಮಕ್ಕಳ ಅನುಕೂಲಕ್ಕಾಗಿ ಸುಮಾರು ರೂ.50 ಸಾವಿರ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಬಸ್ ತಂಗುದಾಣ ಆ.15ರಂದು ಲೋರ್ಕಾಣೆಗೊಳಿಸಲಾಯಿತು.
ತಂಗುದಾಣವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿ ಮಾತನಾಡಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಗೆ ಅಗತ್ಯವಿರುವ ಸ್ಥಳದಲ್ಲಿ ಮೂಲಸೌಕರ್ಯ ಕಲ್ಪಿಸುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿರುವುದು ಅಭಿನಂದನೀಯ. ಇಂತಹ ಸೇವಾ ಕಾರ್ಯಗಳು ಸಮಾಜದಲ್ಲಿ ಪರಸ್ಪರ ಸಹಕಾರ ಹಾಗೂ ಜವಾಬ್ದಾರಿಯ ಮನೋಭಾವವನ್ನು ಬೆಳೆಸುತ್ತವೆ ಎಂದರು.
ಇದೇ ಸಂದರ್ಭದಲ್ಲಿ ಹರ್ತಟ್ಟು ಗ್ರಾಮವನ್ನು ಹಸಿರು ಗ್ರಾಮವನ್ನಾಗಿಸುವ ಉದ್ದೇಶದಿಂದ ಹಸಿರು ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಇದರ ಅಂಗವಾಗಿ ಮಹಿಳಾ ಸದಸ್ಯರಿಗೆ 150 ಸಸಿಗಳನ್ನು ವಿತರಿಸಲಾಯಿತು. ಪರಿಸರ ಸಂರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಹಸಿರು ಪರಿಸರ ನಿರ್ಮಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಸಿ ನೆಟ್ಟು ಪೋಷಿಸುವಂತೆ ಕರೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮಣೂರು ಶ್ರೀ ಮಹಾಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸತೀಶ್ ಹೆಚ್. ಕುಂದರ್, ಉದ್ಯಮಿ ಶ್ಯಾಮಸುಂದರ್ ಭಂಡಾರಿ, ಹರ್ತಟ್ಟು ಅಜ್ಜಯ್ಯ ಪರಿವಾರ ದೇವಸ್ಥಾನದ ಅಧ್ಯಕ್ಷ ವಾಸುದೇವ್ ಮಯ್ಯ, ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ತಿಮ್ಮಕಾಂಚನ್, ಕೋಟ ಪಂಚಾಯತ್ ಮಾಜಿ ಅಧ್ಯಕ್ಷ ಅಜಿತ್ ದೇವಾಡಿಗ,ನವೋದಯ ಫ್ರೆಂಡ್ಸ್‍ನ ಚಂದ್ರ ಹರ್ತಟ್ಟು,ಶ್ರೀನಾಥ್ ಪೂಜಾರಿ, ಸೇರಿದಂತೆ ಗ್ರಾಮಸ್ಥರು ಹಾಗೂ ನವೋದಯ ಫ್ರೆಂಡ್ಸ್‍ನ ಸದಸ್ಯರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here