ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಆಗಸ್ಟ್ 17ರಂದು ನಾಗರಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ, ಖಾಸಗಿ ಸಂಸ್ಥೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.












