ಕುಂದಾಪುರ ಸಾರ್ವಜನಿಕ ಆಸ್ಪತ್ರೆಗೆ ಹೊಸ ಕಟ್ಟಡಕ್ಕೆ ಅನುದಾನ ಕೋರಿ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ

0
9

Click Here

Click Here

ಕುಂದಾಪುರ ಮಿರರ್ ಸುದ್ದಿ…

ಬೆಂಗಳೂರು :ತಾಲೂಕು ಉಪ ವಿಭಾಗೀಯ ಸಾರ್ವಜನಿಕ ಆಸ್ಪತ್ರೆ ಕುಂದಾಪುರದ ಹಳೆಯ ಶಿಥಿಲ ಕಟ್ಟಡವನ್ನು ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡುವಂತೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಬೆಂಗಳೂರಿನ ವಿಧಾನಸೌಧದ ಕೊಠಡಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

Click Here

ಕುಂದಾಪುರ ತಾಲೂಕು ಆಸ್ಪತ್ರೆಯ ಹಳೆ ಕಟ್ಟಡ ಸಂಪೂರ್ಣವಾಗಿ ಶಿಥಿಲಗೊಂಡಿದ್ದು, ಇದರಿಂದ ಸಿಬ್ಬಂದಿ ಮತ್ತು ರೋಗಿಗಳಿಗೆ ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕರು ಗಮನಕ್ಕೆ ತಂದರು. ಹಳೆಯ ಕಟ್ಟಡ ತೆರವುಗೊಳಿಸಿ ಕೂಡಲೇ ಹೊಸ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ವಿನಂತಿಸಿದರು. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಸಚಿವರು ಭರವಸೆ ನೀಡಿದರು.

Click Here

LEAVE A REPLY

Please enter your comment!
Please enter your name here