ಕೆಪಿಎಸ್ ಕೋಟೇಶ್ವರ ಕುಸ್ತಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

0
29

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ, ಉಡುಪಿ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್, ಕುಂದಾಪುರ ಇವರ ಸಹಯೋಗದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ, ಕೋಟೇಶ್ವರ ಇಲ್ಲಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಪಂದ್ಯಾಟದಲ್ಲಿ ಸಮೃದ್ಧಿ – 69 ಕೆ.ಜಿ. ವಿಭಾಗದಲ್ಲಿ ಪ್ರಥಮ, ಸಾನ್ವಿ – 54 ಕೆ.ಜಿ. ವಿಭಾಗದಲ್ಲಿ ಪ್ರಥಮ, ಮಹಮ್ಮದ್ ಕಬೀರ್ – 68 ಕೆ.ಜಿ. ವಿಭಾಗದಲ್ಲಿ ಪ್ರಥಮ, ಅಬ್ದುಲ್ ರಿಜ್ವಾನ್ ಸೈಯದ್ – 52 ಕೆ.ಜಿ. ವಿಭಾಗದಲ್ಲಿ ದ್ವಿತೀಯ, ಅನನ್ಯ – 40 ಕೆ.ಜಿ. ವಿಭಾಗದಲ್ಲಿ ದ್ವಿತೀಯ, ಫಾತಿಮಾ ಝೋಯಾ – 39 ಕೆ.ಜಿ. ವಿಭಾಗದಲ್ಲಿ ದ್ವಿತೀಯ ಹಾಗೂ ಮಾನ್ವಿ – 46 ಕೆ.ಜಿ. ವಿಭಾಗದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ.
ಇವರಲ್ಲಿ ಸಮೃದ್ಧಿ, ಸಾನ್ವಿ ಹಾಗೂ ಮಹಮ್ಮದ್ ಕಬೀರ್ ಅವರು ರಾಜ್ಯಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆಯಾಗುವ ಮೂಲಕ ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ.
ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಉಪಪ್ರಾಂಶುಪಾಲರಾದ ಚಂದ್ರಶೇಖರ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರಾದ ಉದಯ ಮಡಿವಾಳ ಎಂ. ಹಾಗೂ ತಂಡ ವ್ಯವಸ್ಥಾಪಕಿ ರಜನಿ ಅಭಿನಂದಿಸಿದರು.

Click Here

LEAVE A REPLY

Please enter your comment!
Please enter your name here