ಕೆಪಿಎಸ್ ಕೋಟೇಶ್ವರ ಅಮೃತ ಮಹೋತ್ಸವ ಸಮಿತಿಗೆ ಗಜೇಂದ್ರ ಶೆಟ್ಟಿ ಮೂಡುಗೋಪಾಡಿ ಅಧ್ಯಕ್ಷರಾಗಿ ಆಯ್ಕೆ

0
13

Click Here

Click Here

ಕುಂದಾಪುರ ಮಿರರ್ ಸುದ್ದಿ

Click Here

ಕೋಟೇಶ್ವರ: ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಕೋಟೇಶ್ವರ ಇದರ ಅಮೃತ ಮಹೋತ್ಸವದ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಮೃತ ಮಹೋತ್ಸವ ಸಮಿತಿಯನ್ನು ರಚಿಸಲಾಯಿತು.
ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿ ಗಜೇಂದ್ರ ಶೆಟ್ಟಿ ಮೂಡುಗೋಪಾಡಿ ಅವರನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಎ. ಕಿರಣ್ ಕುಮಾರ್ ಕೊಡ್ಗಿ, ಶಾಸಕರು, ಕುಂದಾಪುರ ವಿಧಾನಸಭಾ ಕ್ಷೇತ್ರ, ಗೌರವ ಕಾರ್ಯದರ್ಶಿಯಾಗಿ ಪ್ರಾಂಶುಪಾಲರಾದ ಪ್ರಕಾಶ್ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಉಪ ಪ್ರಾಂಶುಪಾಲರಾದ ಚಂದ್ರಶೇಖರ್ ಶೆಟ್ಟಿ ಆಯ್ಕೆಯಾದರು.
ಖಜಾಂಚಿಯಾಗಿ ಶಂಕರ್ ನಾಯ್ಕ್ ಹಾಗೂ ಉಪಾಧ್ಯಕ್ಷರಾಗಿ ಡಾ. ಸುಧಾಕರ್ ನಂಬಿಯಾರ್, ಸುಭಾಷ್ ಶೆಟ್ಟಿ ಮತ್ತು ರಾಜೇಶ್ ಉಡುಪ ಅವರನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಊರಿನ ಪ್ರಮುಖರಾದ ಶಶಿಧರ್ ಶೆಟ್ಟಿ, ಸಂಜೀವ ಮರಕಾಲ, ಗೋಪಾಲಕೃಷ್ಣ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ, ಗಿರೀಶ್, ಅಶೋಕ್ ಹಾಗೂ ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.
ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸುವ ಕುರಿತು ಸಭೆಯಲ್ಲಿ ಚರ್ಚಿಸಿ, ವಿವಿಧ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ಧಪಡಿಸುವ ಬಗ್ಗೆ ನಿರ್ಧರಿಸಲಾಯಿತು.

Click Here

LEAVE A REPLY

Please enter your comment!
Please enter your name here