ಕುಂದಾಪುರ ಮಿರರ್ ಸುದ್ದಿ…
ಬೈಂದೂರು: ಬೈಂದೂರು ಸಮೀಪದ ಹೇನ್‍ಬೇರುವಿನ ನಿರ್ಜನ ಪ್ರದೇಶದಲ್ಲಿ ಕಾರಿನೊಂದಿಗೆ ವ್ಯಕ್ತಿಯನ್ನು ಸುಟ್ಟು ಕೊಲೆಗೈದ ಪ್ರಕರಣವನ್ನು ಒಂದೇ ದಿನದಲ್ಲಿ ಭೇದಿಸಿದ ಬೈಂದೂರು ಪೊಲೀಸ್ ತಂಡಕ್ಕೆ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರು ರೂ.50,000 ಬಹುಮಾನ ಘೋಷಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ತಿಳಿಸಿದ್ದಾರೆ.
ಬೈಂದೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಚಿನ್ನಾಭರಣ ಕಳವು ಪ್ರಕರಣ ಹಾಗೂ ಕಾರಿನೊಂದಿಗೆ ವ್ಯಕ್ತಿಯೊನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಂಡವನ್ನು ರಚಿಸಿ ಕ್ಷಿಪ್ರವಾಗಿ ಪ್ರಕರಣ ಭೇದಿಸಲಾಗಿದೆ. ಪೊಲೀಸ್ ತಂಡಕ್ಕೆ ಪಶ್ಚಿಮ ವಲಯ ಐಜಿಪಿ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ ಎಂದು ಹೇಳಿದ ಅವರು ಕಾರಿನೊಂದಿಗೆ ವ್ಯಕ್ತಿಯನ್ನು ಸುಟ್ಟು ಕೊಲೆಗೈದ ಪ್ರಕರಣವನ್ನು ಪ್ರಕರಣದ ತನಿಕೆ ಮುಂದುವರಿದಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕುಂದಾಪುರ ಉಪವಿಭಾಗದ ಪೆÇಲೀಸ್ ಉಪಾಧೀಕ್ಷಕ ಶ್ರೀಕಾಂತ್ ಕೆ., ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಬೈಂದೂರು ಪೊಲೀಸ್ ಉಪನಿರೀಕ್ಷಕ ಪವನ್ ನಾಯಕ್, ಗಂಗೊಳ್ಳಿ ಪೊಲೀಸ್ ಉಪನಿರೀಕ್ಷಕ ವಿನಯ್ ಕೊರ್ಲಹಳ್ಳಿ ಉಪಸ್ಥಿತರಿದ್ದರು.
ಪಶ್ಚಿಮ ವಲಯ ಐಜಿಪಿ ಭೇಟಿ:
ಠಾಣೆಗೆ ಪಶ್ಚಿಮ ವಲಯ ಐಜಿಪಿ ಭೇಟಿ ನೀಡಿ ಪ್ರಕರಣದ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಕರಣವನ್ನು ಭೇದಿಸಿದ ಬೈಂದೂರು ಪೊಲೀಸ್ ತಂಡಕ್ಕೆ ರೂ.50,000 ಬಹುಮಾನವನ್ನು ಘೋಷಿಸಿ ತೆರಳಿದ್ದಾರೆ.











