ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕುಂದಾಪುರ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುಂಭಾಶಿ ಬಳಿ ಸುಮಾರು 2 ಅಡಿ ಆಳದ ಹೊಂಡ ನಿರ್ಮಾಣವಾಗಿದೆ. ಈ ಹೊಂಡವು ಮಳೆ ನೀರಿನಿಂದ ವಾಹನ ಸವಾರರಿಗೆ ಕಾಣದೇ ಬಸ್ಸೊಂದು ಎರಡು ಅಡಿ ಹೊಂಡಕ್ಕೆ ಬಸ್ ಇಳಿದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡು 300 ಮೀಟರ್ ದೂರ ಡಿವೈಡರ್ ಮೇಲೆ ಚಲಿಸಿದ ಘಟನೆ ತಾಲೂಕಿನ ಕುಂಭಾಸಿ ಸಮೀಪದ ಕೊರವಡಿ ಕ್ರಾಸ್ ಬಳಿ ಶನಿವಾರ ನಡೆದಿದೆ.
Video:
ಮುಂಬೈನಿಂದ ಮಂಗಳೂರಿನತ್ತ ಸಾಗುತ್ತಿದ್ದ ಆನಂದ್ ಹೆಸರಿನ ಖಾಸಗಿ ಬಸ್ ಕುಂಭಾಸಿ ಸಮೀಪದ ಕೊರವಡಿ ಕ್ರಾಸ್ ಬಳಿ ಹೆದ್ದಾರಿ ಹೊಂಡಕ್ಕೆ ಇಳಿದಿದೆ. ವೇಗದಲ್ಲಿದ್ದ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಸುಮಾರು 300 ಮೀಟರ್ ದೂರ ಡಿವೈಡರ್ ಏರಿ ಸಾಗಿದ್ದು ಚಾಲಕನ ಸಮಯಪ್ರಜ್ಞೆಯಿಂದ ಪಲ್ಟಿಯಾಗುವುದು ತಪ್ಪಿದಂತಾಗಿದೆ.
ಅಪಾಯದಲ್ಲಿ ಸಾಗಿದ ಬಸ್ ಕನ್ನುಕೆರೆ ಮಸೀದಿ ಎದುರು ಡಿವೈಡರ್ ಏರಿ ನಿಂತಿದೆ. ಬಸ್ಸಿನಲ್ಲಿ 40ಕ್ಕೂ ಅಧಿಕ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ.











