ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ತೆಕ್ಕಟ್ಟೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನವನ್ನು ಶುಕ್ರವಾರ ಹಮ್ಮಿಕೊಂಡಿತು.
ಕರ್ನಾಟಕ ಸರ್ಕಾರ, ಸ್ವಚ್ಛ ಭಾರತ್ ಮಿಷನ್ ಎಸ್ ಬಿ ಎಂ. ತೆಕ್ಕಟ್ಟೆ ಗ್ರಾಮ ಪಂಚಾಯತಿ, ತೆಕ್ಕಟ್ಟೆ ಫ್ರೆಂಡ್ಸ್, ಜೈ ಭಾರತ್ ತೆಕ್ಕಟ್ಟೆ, ಕನ್ನುಕೆರೆ ಫ್ರೆಂಡ್ಸ್ ತೆಕ್ಕಟ್ಟೆ, ಎಸ್.ಎಲ್.ಆರ್.ಎಮ್ ಕೇಂದ್ರ ತೆಕ್ಕಟ್ಟೆ ಹಾಗೂ ವಿಕಾಸ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ ತೆಕ್ಕಟ್ಟೆ ಇವುಗಳ ಜಂಟಿ ನೇತೃತ್ವದಲ್ಲಿ ‘ಸ್ವಚ್ಛತೆಯೇ ಸೇವೆ – 2026’ ಶೀರ್ಷಿಕೆಯಡಿ ರಾಷ್ಟ್ರೀಯ ಹೆದ್ದಾರಿ 66ರ ಅಕ್ಕಪಕ್ಕದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ ನಡೆಸಿತು.
ಪಿಡಿಒ ಸಂತೋಷ್ ಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಪಂಚಾಯತ್ ಕಾರ್ಯದರ್ಶಿ ನೀಲು, ನಿಕಟ ಪೂರ್ವ ಪಂಚಾಯತ್ ಸದಸ್ಯರು, ಮಾಜಿ ಅಧ್ಯಕ್ಷರು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.












