ಚೇತನಾ ಪ್ರೌಢ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

0
7

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ: ಇಲ್ಲಿನ ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ 157ನೇ ಗಾಂಧೀ ಜಯಂತಿ, ಹಾಗೂ 122ನೇ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್, ಹಂಗರಕಟ್ಟೆ- ಸಾಸ್ತಾನ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸಿ ಬಹುಮಾನವನ್ನು ವಿತರಿಸಲಾಯಿತು.
ನಿವೃತ್ತ ಮುಖ್ಯ ಶಿಕ್ಷಕ ಗಣೇಶ್. ಜಿ ದಿನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕನ್ನಡ ಅಧ್ಯಾಪಕ ಎಂ. ಪಕೀರಪ್ಪ, ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಈ ವೇಳೆ ರೋಟರಿ ಕ್ಲಬ್, ಹಂಗಾರಕಟ್ಟೆ- ಸಾಸ್ತಾನ ಇವರು ಶಾಲೆಗೆ ಫ್ಯಾನ್ ಕೊಡುಗೆಯಾಗಿ ನೀಡಿದರು.
ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷೆ ಕುಸುಮ ಮನೋಜ್, ಹಾಗೂ ರೋಟರಿ ಕ್ಲಬ್ ಮಾಜಿ ಅಧ್ಯಕ್ಷರಾದ ಮನೋಜ್ ಕುಮಾರ್,ಸುಲತಾ ಹೆಗ್ಡೆ, ಲೀಲಾವತಿ, ಅರವಿಂದ ಶರ್ಮಾ, ಪದಾಧಿಕಾರಿಗಳಾದ ನಯನ ಜೆ. ಶೆಟ್ಟಿ, ಮಮತಾ ಮುಂತಾದವರು ಉಪಸ್ಥಿತರಿದ್ದರು
ಮುಖ್ಯ ಶಿಕ್ಷಕಿ ಕಲ್ಪನಾ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಹಿರಿಯ ಅಧ್ಯಾಪಕ ಚಂದ್ರ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಹರ್ಷವರ್ಧನ ಶೆಟ್ಟಿ ವಂದಿಸಿದರು.

Click Here

LEAVE A REPLY

Please enter your comment!
Please enter your name here