ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕ್ರಿಕೆಟ್‌ ಪಂದ್ಯಾಟಕ್ಕೆ ಆಯ್ಕೆ

0
37

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಇತ್ತೀಚೆಗೆ ಕಲ್ಲಬೆಟ್ಟುವಿನ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 14 ವರ್ಷದ ವಯೋಮಿತಿಯ ಬಾಲಕರ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯು ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಈ ಸಾಧನೆಯಲ್ಲಿ ಕುಂದಾಪುರದ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಸಾಯಿಶ್ ಜಿ. ಹೆಗ್ಡೆ ಹಾಗೂ ಆತ್ಮಯ್ ಎಂ. ಅವರು ಅತ್ಯುತ್ತಮ ಪ್ರತಿಭೆ ಮೆರೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

Click Here

ವಿದ್ಯಾರ್ಥಿಗಳ ಈ ಸಾಧನೆಗೆ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ್ ಅವರು ವಿಜೇತ ವಿದ್ಯಾರ್ಥಿಗಳನ್ನು ಹಾಗೂ ಅವರಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಅಭಿನಂದಿಸಿದ್ದಾರೆ.

Click Here

LEAVE A REPLY

Please enter your comment!
Please enter your name here