ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಶಾಲೆ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕುಂದಾಪುರ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಹಾಲಾಡಿಯಲ್ಲಿ ಜರುಗಿದ 14 ಮತ್ತು 17 ವರ್ಷ ವಯೋಮಾನದೊಳಗಿನ ವೃತ್ತಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ, ಕುಂದಾಪುರದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರತಿಭೆ ಮೆರೆದು ಅಭೂತಪೂರ್ವ ಸಾಧನೆ ಮಾಡಿದ್ದಾರೆ.
17 ವರ್ಷ ವಯೋಮಿತಿಯೊಳಗಿನ ವಿಭಾಗದ ಹುಡುಗರ ಮತ್ತು ಹುಡುಗಿಯರ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿವೆ.
14 ವರ್ಷ ವಯೋಮಿತಿಯೊಳಗಿನ ವಿಭಾಗದ ಹುಡುಗಿಯರ ಮತ್ತು ಹುಡುಗರ ತಂಡಗಳು ದ್ವಿತೀಯ ಸ್ಥಾನ ಪಡೆದುಕೊಂಡಿವೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸುಜ್ಞಾನ ಎಜುಕೇಷನಲ್ ಟ್ರಸ್ಟ್‌ನ ಅಧ್ಯಕ್ಷರಾದ ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ್ ಅವರು ಹರ್ಷ ವ್ಯಕ್ತಪಡಿಸಿ, ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಶಾಲೆಯ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಸೂಕ್ತ ಮಾರ್ಗದರ್ಶನ ಮತ್ತು ತರಬೇತಿ ನೀಡಿದ್ದರು.












