ವಕ್ವಾಡಿ :ಗುರುಕುಲ ವಿದ್ಯಾ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ

0
24

Click Here

Click Here

ತಾಳ್ಮೆ, ತ್ಯಾಗ, ಸಹಕಾರ ಕ್ರೀಡೆಯ ಪ್ರಮುಖ ಅಂಗವಾಗಿದೆ. ಆತ್ಮಸ್ಥೈರ್ಯವನ್ನು ಹೆಚ್ಚಿಸಲು ಕ್ರೀಡೆಯು ಹೇತುವಾಗಿದೆ- ಡಾ. ಗಜಾನನ ಪ್ರಭು ಬಿ.

Click Here

ಕುಂದಾಪುರ ಮಿರರ್ ಸುದ್ದಿ…
ಕೋಟೇಶ್ವರ :ವಕ್ವಾಡಿಯ ಗುರುಕುಲ ವಿದ್ಯಾ ಸಂಸ್ಥೆಯಲ್ಲಿ 21ನೇ ಶೈಕ್ಷಣಿಕ ವರ್ಷದ ವಾರ್ಷಿಕ ಕ್ರೀಡಾಕೂಟವನ್ನು ಸಂಭ್ರಮದಿಂದ ಆಚರಿಸಲಾಯಿತು.
ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ಗಜಾನನ ಪ್ರಭು ಬಿ. ಇವರು ಕ್ರೀಡಾ ಜ್ಯೋತಿಗೆ ಚಾಲನೆ ನೀಡಿ ಉದ್ಘಾಟಿಸುತ್ತ – ಕ್ರೀಡೆ ಬದುಕಿನ ಅವಿಭಾಜ್ಯ ಅಂಗ. ಕ್ರೀಡೆಯಿಂದ ದೈಹಿಕ ಸಾಮರ್ಥ್ಯ ಹೆಚ್ಚುವುದಲ್ಲದೆ, ಮಾನಸಿಕವಾಗಿಯೂ ಸುದೃಢವಾಗಿ ಇರುವಂತೆ ಮಾಡುತ್ತದೆ. ತಾಳ್ಮೆ, ತ್ಯಾಗ, ಸಹಕಾರ ಕ್ರೀಡೆಯ ಪ್ರಮುಖ ಅಂಗವಾಗಿದ್ದು,ಕ್ರೀಡಾಕೂಟದಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಸೋಲಿಗೆ ಕುಗ್ಗದೆ, ಗೆಲುವಿಗೆ ಅಹಂಕಾರ ಪಡದೆ ಕ್ರೀಡಾ ಸ್ಪೂರ್ತಿಯಿಂದ ಮುನ್ನಡೆಯಬೇಕೆಂದರು.
ಈ ಸಂದರ್ಭದಲ್ಲಿ ಎನ್ ಸಿಸಿ ಕೆಡೆಟ್ ಗಳ ಪಥ ಸಂಚನ, ಏರೋಬಿಕ್ಸ್, ಕರಾಟೆ ಪ್ರದರ್ಶನವನ್ನು ಮೆಚ್ಚಿ ಶ್ಲಾಘಿಸಿದರು. ಬಾಂಡ್ಯಾ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಕೆ. ಸುಭಾಶ್ಚಂದ್ರ ಶೆಟ್ಟಿಯವರು ಸಭಾಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಅನುಪಮ ಎಸ್ ಶೆಟ್ಟಿ, ಬಾಂಡ್ಯಾ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರು ಇವರು ಗೌರವ ಉಪಸ್ಥಿತಿಯಲ್ಲಿದ್ದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ ನಾಯ್ಕ ರವರು ಉಪಸ್ಥಿತರಿದ್ದರು.
ಗುರುಕುಲ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ರವರು ಸರ್ವರನ್ನು ಸ್ವಾಗತಿಸಿದರು. ಕೀರ್ತಿ ಶೆಟ್ಟಿ ಹಾಗೂ ಪ್ರಿಯಾಂಕ ಜಂಟಿಯಾಗಿ ಕಾರ್ಯಕ್ರಮ ನಿರ್ವಹಿಸಿದರು. ಬಬಿತಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಸುಷ್ಮಾ ವಂದಿಸಿದರು.

Click Here

LEAVE A REPLY

Please enter your comment!
Please enter your name here