ಕುಂದಾಪುರ: ಮಣಿಪಾಲ ಆರೋಗ್ಯ ಕಾರ್ಡ್ ನೋಂದಾವಣಿಗೆ ಚಾಲನೆ

0
652

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುವಂತೆ ನೀಡುವ ದೃಷ್ಟಿಯಿಂದ ಆರಂಭಿಸಲಾದ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆ 22ನೇ ವರ್ಷಕ್ಕೆ ಪಾದರ್ಪಣೆ ಮಾಡುತ್ತಿದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಸದಸ್ಯರಾಗಿ ಪ್ರಯೋಜನ ಪಡೆಯಬಹುದು. ಕಾರ್ಡ್ ಖರೀಧಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಬಾರಿ ಕಾರ್ಡ್ ಬಳಕೆಗಳಲ್ಲಿ ರಿಯಾಯತಿಯ ರೂಪದಲ್ಲಿ ಹಿಂಪಡೆಯಬಹುದು. 2022ರ ಮಣಿಪಾಲ ಆರೋಗ್ಯ ಕಾರ್ಡ್ ನೋಂದಾವಣಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಆಗಸ್ಟ್ 30 ನೋಂದಾವಣಿಗೆ ಕೊನೆಯ ದಿನವಾಗಿದೆ ಎಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವ್ಯವಸ್ಥಾಪಕ ಮೋಹನ ಶೆಟ್ಟಿ ಹೇಳಿದರು.

Video:-

ಅವರು ಕುಂದಾಪುರದ ಪ್ರೆಸ್‍ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

Click Here

ಮಣಿಪಾಲ್ ಆರೋಗ್ಯ ಕಾರ್ಡ್ 2022ರ ಯೋಜನೆಯ ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ರೂ.300, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ರೂ.600, ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ, ಮಾವ) ರೂ.750 ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರೂ.500, ಕುಟುಂಬಕ್ಕೆ ರೂ.800, ಕೌಟುಂಬಿಕ ಪ್ಲಸ್ ರೂ.950 ಆಗಿರುತ್ತದೆ ಎಂದರು.

ಹೊರ ರೋಗಿ ವಿಭಾಗದಲ್ಲಿ ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆಯಲ್ಲಿ ಶೇ.50, ಪ್ರಯೋಗಾಲಯ ಪರೀಕ್ಷೆಯಲ್ಲಿ ಶೇ.30, ಸಿಟಿ, ಎಂಆರ್‍ಐ., ಅಲ್ಟ್ರಾ ಸೌಂಡ್‍ಗಳಲ್ಲಿ ಶೇ.20, ಹೊರರೋಗಿ ವಿಭಾಗ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇ.20, ಔಷಧಾಲಯಗಳಲ್ಲಿ ಶೇ.12 ರಿಯಾಯತಿ ಪಡೆಯಬಹುದು. ಒಳರೋಗಿ ವಿಭಾಗದಲ್ಲಿ ಸಾಮಾನ್ಯ ವಾರ್ಡಿನಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇ.25, ಕೋವಿಡ್ ರೋಗಿಗಳಿಗೆ ಜನರಲ್ ವಾರ್ಡ್‍ನಲ್ಲಿ ಸರ್ಕಾರ ಅನುಮೋದಿತ ಪ್ಯಾಕೇಜ್ ಮೇಲೆ ಶೇ.10 ರಿಯಾಯತಿ ದೊರೆಯುತ್ತದೆ ಎಂದರು.

ಕಾರ್ಡ್ ಹೊಂದಿರುವವರು ಕರಾವಳಿ ಕರ್ನಾಟಕ ಮತ್ತು ಗೋವಾದ ಮಣಿಪಾಲ್ ಗ್ರೂಫ್ ಆಸ್ಪತ್ರೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಇದರಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎ ಪೈ ಆಸ್ಪತ್ರೆ ಉಡುಪಿ, ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು, ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಕಟೀಲು,ಮಣಿಪಾಲ್ ಆಸ್ಪತ್ರೆ ಗೋವಾ, ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾ ಆಸ್ಪತ್ರೆಗಳಲ್ಲಿ ರಿಯಾಯತಿ ಪ್ರಯೋಜನ ಪಡೆಯಬಹುದು. ವರ್ಷದಲ್ಲಿ ಎಷ್ಟು ಬಾರಿ ಬೇಕಾದರೂ ಕಾರ್ಡ್ ಉಪಯೋಗಿಸಬಹುದು ಎಂದರು.
ಮಣಿಪಾಲ ಆರೋಗ್ಯ ಕಾರ್ಡ್‍ನ ಪ್ರತಿನಿಧಿಯಾಗಬೇಕಾದ್ದಲ್ಲಿ ಅಕ್ಷಯ್ ಕುಮಾರ್, ಮೊ: 9740891816 ಅವರನ್ನು ಸಂಪರ್ಕಿಸಬಹುದು. 2022ರ ನೋಂದಾವಣಿಗಾಗಿ ಅಧಿಕೃತ ಪ್ರತಿನಿಧಿಗಳನ್ನು ಸಂಪರ್ಕಿಸಬಹುದು ಎಂದರು.

ಸುದ್ಧಿಗೋಷ್ಠಿಯಲ್ಲಿ ಮಾರುಕಟ್ಟೆ ವಿಭಾಗದ ಪ್ರತಿನಿಧಿಗಳಾದ ಅಕ್ಷಯ್ ಕುಮಾರ್ ಮತ್ತು ಅನಿಲ್ ನಾಯ್ಕ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ಮಣಿಪಾಲ ಆರೋಗ್ಯ ಕಾರ್ಡನ್ನು ಹಿರಿಯ ಪತ್ರಕರ್ತ ಶ್ರೀಪತಿ ಹೆಗಡೆ ಹಕ್ಲಾಡಿ ಅವರಿಗೆ ಹಸ್ತಾಂತರಿಸಲಾಯಿತು.

Click Here

LEAVE A REPLY

Please enter your comment!
Please enter your name here