ಕುಂದಾಪುರ ಮಿರರ್ ಸುದ್ದಿ…
ಕೋಟ: ನವಂಬರ್ ೧೯,೨೦ ಹಾಗೂ ೨೧ರಂದು ಧಾರವಾಡದ ಜೆ ಎಸ್ ಎಸ್ ವಿದ್ಯಾಸಂಸ್ಥೆ ವಿದ್ಯಾಗಿರಿ ಇಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ನಡೆದ ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಕೋಟದ ವಿವೇಕ ಪ.ಪೂ. ಕಾಲೇಜಿನ ವಿದ್ಯಾರ್ಥಿ ದೃಶ್ಯ ಆರ್. , ೯೭ ಕೆ.ಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದರು .ವಿದ್ಯಾರ್ಥಿಯ ಸಾಧನೆಗೆ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಹಾಗೂ ಕಾಲೇಜಿನ ಪ್ರಾಂಶುಪಾಲ ಉಪನ್ಯಾಸಕ ವೃಂದ ಅಭಿನಂದಿಸಿದೆ.












