ಕೋಟೇಶ್ವರದಲ್ಲಿ ಕಾರು, ಬೈಕ್‌ ನಡುವೆ ಭೀಕರ ಅಪಘಾತ: ಶಿವಮೊಗ್ಗ ಮೂಲದ ಯುವಕ ಸಾವು

0
12

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕೋಟೇಶ್ವರ: ಕುಟುಂಬದ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಕೋಟೇಶ್ವರಕ್ಕೆ ಆಗಮಿಸಿದ್ದ ಶಿವಮೊಗ್ಗ ಜಿಲ್ಲೆಯ ಯುವಕನೊಬ್ಬ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಶಿವಮೊಗ್ಗ ಜಿಲ್ಲೆಯ ಹುಂಚಾ ಗ್ರಾಮದ ಹರ್ಷ ಎಂದು ಗುರುತಿಸಲಾಗಿದೆ. ಕುಟುಂಬದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹರ್ಷ, ಸಮಾರಂಭ ಮುಗಿದ ಬಳಿಕ ಇತರ ಯುವಕರೊಂದಿಗೆ ಎರಡು ಬೈಕ್‌ಗಳಲ್ಲಿ ತೆರಳುತ್ತಿದ್ದ ವೇಳೆ ಕಾರಿಗೆ ಡಿಕ್ಕಿ ಹೊಡೆದಿರುವುದಾಗಿ ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಹರ್ಷ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಸುದ್ದಿ ತಿಳಿದು ಶಾಸಕ ಕಿರಣ್ ಕೊಡ್ಲಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತ ಯುವಕನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಂತಸದಿಂದ ಕೋಟೇಶ್ವರಕ್ಕೆ ಆಗಮಿಸಿದ್ದ ಯುವಕ ಅಪಘಾತದಲ್ಲಿ ದುರಂತ ಅಂತ್ಯ ಕಂಡಿರುವುದು ಕುಟುಂಬಸ್ಥರು, ಬಂಧುಗಳು ಹಾಗೂ ಸ್ನೇಹಿತರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ಕುಂದಾಪುರ ಸಂಚಾರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Click Here

LEAVE A REPLY

Please enter your comment!
Please enter your name here