ಕುಂದಾಪುರ ಮಿರರ್ ಸುದ್ದಿ…
ಬ್ರಹ್ಮಾವರ: ನಿರುದ್ಯೋಗ, ಬೆಲೆ ಯಿಂದ ಬಿಜೆಪಿ ಆಡಳಿತದಲ್ಲಿ ಸಂಪೂರ್ಣ ವಿಫಲ ವಾಗಿದೆ. ಅದನ್ನು ಮರೆಮಾಚಲು ತನಿಖೆಯೆಂಬ ಅಸ್ತ್ರಗಳನ್ನು ಬಳಸುವ ಮೂಲಕ ವಿಪಕ್ಷದ ಧ್ವನಿಯನ್ನು ಅಡಗಿಸುವ ಕಾರ್ಯ ಮಾಡುತ್ತಿದೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು.
Video:


ಸೋನಿಯಾ ಮತ್ತು ರಾಹುಲ್ ಗಾಂಧಿ ಅವರ ಇಡಿ ವಿಚಾರಣೆಯನ್ನು ವಿರೋಧಿಸಿ ಶುಕ್ರವಾರ ಬ್ರಹ್ಮಾವರದಲ್ಲಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಮಾತನಾಡಿದರು.
ಬಡವರ ಉದ್ಧಾರ ಮಾಡಿದ ಕಾಂಗ್ರೆಸ್ ಪಕ್ಷವನ್ನು ಎಂದಿಗೂ ಮುಗಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು. ಮಾಜಿ ಸಚಿವ, ಶಾಸಕ ಯು.ಟಿ. ಖಾದರ್ ಮಾತನಾಡಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪ್ರಮುಖರಾದ ವೆರೋನಿಕಾ ಕರ್ನೇಲಿಯೊ, ಪ್ರಖ್ಯಾತ್ ಶೆಟ್ಟಿ ದಿನಕರ ಹೇರೂರು, ರಮೇಶ್ ಕಾಂಚನ್, ಭುಜಂಗ ಶೆಟ್ಟಿ ದಿನೇಶ್ ಪುತ್ರನ್, ಕೃಷ್ಣಮೂರ್ತಿ ಆಚಾರ್ಯ, ನಿತ್ಯಾನಂದ ಶೆಟ್ಟಿ ಮೈರ್ಮಾಡಿ ಸುಧಾಕರ ಶೆಟ್ಟಿ, ಡಾ| ಸುನೀತಾ ಶೆಟ್ಟಿ ಗೀತಾ ವಾಗೈ ರೋಶನಿ ಒಲ್ವೇರಾ, ಕಿಶನ್ ಹೆಗ್ಡೆ ದೀಪಕ್ ಕೋಟ್ಯಾನ್, ಸೌರಭ್ ಬಲ್ಲಾಳ್, ಯತೀಶ್ ಕರ್ಕೇರ, ಪ್ರಸಾದ್ ರಾಜ್ ಕಾಂಚನ್, ಗಣೇಶ್ ನೇರ್ಗಿ, ಸೂರ ಸಾಲ್ಯಾನ್, ಅಶೋಕ್ ನಾಯರಿ, ಎಂ.ಎ. ಗಪೂರ್ ಉಪಸ್ಥಿತರಿದ್ದರು.











