ಕುಂದಾಪುರ ಮಿರರ್ ಸುದ್ದಿ…
ಕೋಟ: ಇದೇ ಜುಲೈ 29ರಿಂದ ಆಗಸ್ಟ್ 27ರವರೆಗೆ ಸಾಲಿಗ್ರಾಮ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಶ್ರಾವಣ ಮಾಸವನ್ನು ಆಚರಿಸಲಾಗುತ್ತಿದ್ದು, ಪ್ರತಿ ಶನಿವಾರದಂದು ವಿಶೇಷ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಭಾಗವಹಿಸುವ ಆಸ್ತಿಕ ಬಂಧುಗಳು ಸಾಂಪ್ರದಾಯಿಕ ಉಡುಗೆ ತೊಡುಗೆಯೊಂದಿಗೆ ಸಾರ್ವಜನಿಕ ಆರೋಗ್ಯ ಸುರಕ್ಷಾ ನಿಯಮಗಳನ್ನು ಪಾಲಿಸುವ ಮೂಲಕ ದೇವಳದ ಆಡಳಿತೆಯೊಂದಿಗೆ ಸಹಕರಿಸಬೇಕಾಗಿ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ವಿನಂತಿಸಿಕೊಂಡಿದ್ದಾರೆ.











