ಕುಂದಾಪುರ ಮಿರರ್ ಸುದ್ದಿ…
ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಡ ಇಲ್ಲಿ 2022-23ನೇ ಸಾಲಿನ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಯೋಜನೆಯಡಿ ಮೊಟ್ಟೆ, ಬಾಳೆಹಣ್ಣು,ಶೇಂಗಾ ಚಿಕ್ಕಿ ವಿತರಿಸುವ ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಬುಧವಾರ ನಡೆಯಿತು.
ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ರಾಜ್ಯದ ಸರ್ಕಾರಿ ಶಾಲೆಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ, 2 ಬಾಳೆಹಣ್ಣು ,ಶೇಂಗಾ ಚಿಕ್ಕಿ ವಿತರಿಸುವ ಕಾರ್ಯಕ್ರಮವನ್ನು ಶಾಲಾ ಎಸ್. ಡಿ.ಎಂ.ಸಿ ಅಧ್ಯಕ್ಷ ಎಸ್.ಅರುಣ್ ಅಡಿಗ ಬಾಳೆಹಣ್ಣು ನೀಡುವುದರ ಮೂಲಕ ಚಾಲನೆ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಜಲಜಾಕ್ಷಿ , ಎಸ್. ಡಿ.ಎಂ.ಸಿ ಉಪಾಧ್ಯಕ್ಷೆ ಅನ್ನಪೂರ್ಣ ಅಂಗನವಾಡಿ ಟೀಚರ್ ರೇವತಿ, ಎಸ್. ಡಿ.ಎಂ.ಸಿ. ಸದಸ್ಯೆಯಾದ ರಾಗಿಣಿ, , ಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.











