ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸೂಚಿಸಿರುವಂತೆ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ವಂಡ್ಸೆಯಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಂಡ್ಸೆ ಒಕ್ಕೂಟದ ವತಿಯಿಂದ ವಂಡ್ಸೆಯ ಶ್ರೀ ತಿರುಮಲ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯ ನೆರವೇರಿಸಲಾಯಿತು.

ದೇವಸ್ಥಾನದ ಆಡಳಿತ ಮೊಕ್ತೇಸರ ವಿ.ಕೆ ಶಿವರಾಮ ಶೆಟ್ಟಿ, ಅರ್ಚಕರಾದ ಗೋಪಾಲಕೃಷ್ಣ ಉಪಾಧ್ಯ, ಗ್ರಾ.ಪಂ. ಮಾಜಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಕಲ್ಮಡಿ, ಧ.ಗ್ರಾ ಯೋಜನೆಯ ವಲಯ ಮೇಲ್ವಿಚಾರಕ ಚಂದ್ರ ಮಧುವನ, ಒಕ್ಕೂಟದ ಅಧ್ಯಕ್ಷ ಗಿರೀಶ್ ನಾಯ್ಕ್, ಸ್ಥಳೀಯರಾದ ಪ್ರೇಮಾನಂದ ಆಚಾರ್ಯ, ಸೇವಾ ಪ್ರತಿನಿಧಿ ಶರ್ಮಿಳಾ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.











