ಕುಂದಾಪುರ ಮಿರರ್ ಸುದ್ದಿ…
ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘ ಕೋಟ, ಇವರ ಆಶ್ರಯದಲ್ಲಿ ಸಂಘದ ಸಿಬ್ಬಂದಿಯವರಿಗೆ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರ ಮತ್ತು ಸಂಘದ ಸೇವೆಯಿಂದ ಇತ್ತೀಚೆಗೆ ನಿವೃತ್ತರಾದ ವ್ಯವಸ್ಥಾಪಕ ಜಯಶೀಲ ಇವರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ ಸಂಘದ ಪ್ರಧಾನ ಕಛೇರಿಯಲ್ಲಿ ಜರಗಿತು.
ಸಂಘದ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಇವರು ತರಬೇತಿ ಕಾರ್ಯಾಗಾರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ರಾಜು ಪೂಜಾರಿ ಮತ್ತು ಅಶೋಕ ಕುಮಾರ್ ಶೆಟ್ಟಿ, ಸಂಘದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ.ಶೋಭಾ, ನಿವೃತ್ತ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎ. ಎಸ್. ಎನ್. ಅಲ್ಸೆ, ಸಂಘದ ಉಪಾಧ್ಯಕ್ಷರಾದ ಜಿ. ರಾಜೀವ ದೇವಾಡಿಗ, ನಿರ್ದೇಶಕರಾದ ಟಿ. ಮಂಜುನಾಥ, ಉದಯ ಕುಮಾರ ಶೆಟ್ಟಿ, ಡಾ. ಕೃಷ್ಣ ಕಾಂಚನ್, ರವೀಂದ್ರ ಕಾಮತ್, ಮಹೇಶ ಶೆಟ್ಟಿ, ರಂಜಿತ್ ಕುಮಾರ,ಗೀತಾ ಶಂಭು ಪೂಜಾರಿ, ಪ್ರೇಮಾ ಎಸ್. ಪೂಜಾರಿ, ಬಿ. ವಸಂತ ಶೆಟ್ಟಿ, ಗುಲಾಬಿ ಡಿ. ಬಂಗೇರ ಉಪಸ್ಥಿತರಿದ್ದರು.
ಸಂಘದಲ್ಲಿ ವಿವಿಧ ಹುದ್ದೆಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಜು.31ರಂದು ನಿವೃತ್ತರಾದ ವ್ಯವಸ್ಥಾಪಕ ಜಯಶೀಲ ಇವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಶಿಬಿರದ ಉದ್ಘಾಟಕ ನೀಲಾವರ ಸುರೇಂದ್ರ ಅಡಿಗ, ಅತಿಥಿ ರಾಜು ಪೂಜಾರಿ ಮತ್ತು ಅಶೋಕ ಕುಮಾರ್ ಶೆಟ್ಟಿ ಇವರನ್ನು ಸಂಘದ ಪರವಾಗಿ ಗೌರವಿಸಲಾಯಿತು.
ವ್ಯವಸ್ಥಾಪಕ ಪಿ. ಶೇಖರ ಮರಕಾಲ ಇವರು ನಿವೃತ್ತರ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಸಂಘದ ನಿರ್ದೇಶಕ ಟಿ. ಮಂಜುನಾಥ ಸ್ವಾಗತಿಸಿ ಪ್ರಾಸ್ತಾವನೆ ಸಲ್ಲಿಸಿದರು. ಸಂಘದ ಸಿಬ್ಬಂದಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ಸಭಾ ಕಾರ್ಯಕ್ರಮದ ನಂತರ ಸಂಘದ ಸಿಬ್ಬಂದಿಯವರಿಗೆ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರ ನಡೆಯಿತು.











