ಕುಂದಾಪುರ ಮಿರರ್ ಸುದ್ದಿ…
ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬ್ರಹ್ಮಾವರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಹಂದಟ್ಟು ಶ್ರೀ ನಂದಿಕೇಶ್ವರ ಜ್ಞಾನ ವಿಕಾಸ ಕೇಂದ್ರದಲ್ಲಿ ಸಿರಿಧಾನ್ಯ ಮೇಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಧ.ಗ್ರಾ.ಯೋಜನೆ ಬ್ರಹ್ಮಾವರ ತಾಲೂಕಿನ ಯೋಜನಾಧಿಕಾರಿ ದಿನೇಶ್ ಶೇರಿಗಾರ್ ಉದ್ಘಾಟಿಸಿ ಆರೋಗ್ಯ ಸುಧಾರಿಸಿಕೊಳ್ಳಲು ಪೌಷ್ಟಿಕ ಆಹಾರದ ಅಗತ್ಯತೆ, ಸಿರಿಧಾನ್ಯಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ದಕ್ಷಿಣಕನ್ನಡ ಜಿಲ್ಲೆಯ ಸಿರಿಧಾನ್ಯ ಮಾರುಕಟ್ಟೆ ಅಧಿಕಾರಿ ಸಂದೀಪ್ ಭಟ್ ಸಿರಿಧಾನ್ಯಗಳ ಮಾಹಿತಿ ನೀಡಿ, ಸಿರಿಧಾನ್ಯಗಳಿಂದ ಮಾಡಬಹುದಾದ ವಿವಿಧ ಖಾದ್ಯಗಳ ಬಗ್ಗೆ, ಆರೋಗ್ಯ ಕಾಪಾಡಿಕೊಳ್ಳಲು ಸಿರಿಧಾನ್ಯ ಬಳಕೆಯ ಬಗ್ಗೆ, ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರಾರಂಭವಾದ ಸಿರಿ ಮಿಲೆಟ್ ಕಾರ್ಯಕ್ರಮದ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಂದಟ್ಟು ಹಾಲು ಉತ್ಪಾದಕರ ಮಹಿಳಾ ಸಂಘ ಮುಖ್ಯಸ್ಥೆ ಜಾನಕಿ ಹಂದೆ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟತಟ್ಟು ಪಂಚಾಯತ್ ಅಧ್ಯಕ್ಷ ಅಶ್ವಿನಿ ದಿನೇಶ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ನಂದಿಕೇಶ್ವರ ಜ್ಞಾನವಿಕಾಸ ಕೇಂದ್ರದ ಎಲ್ಲಾ ಸದಸ್ಯರು ಉಪಸ್ಥಿತರಿದ್ದು, 38 ಕ್ಕೂ ಮಿಕ್ಕಿ ಸಿರಿಧಾನ್ಯ ಮತ್ತು ಪೌಷ್ಟಿಕ ಆಹಾರ ಖಾದ್ಯಗಳನ್ನು ಪ್ರದರ್ಶನ ನಡೆಯಿತು.
ಕಾರ್ಯಕ್ರಮವನ್ನು ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ನೇತ್ರಾವತಿ ನಿರೂಪಿಸಿ, ಕೋಟ ವಲಯದ ಮೇಲ್ವಿಚಾರಕಿ ಸುಲೋಚನಾ ಗಣೇಶ್ ಸ್ವಾಗತಿಸಿ, ಸೇವಾ ಪ್ರತಿನಿಧಿ ಶ್ಯಾಮಲ ರಾಜು ಪೂಜಾರಿ ವಂದಿಸಿದರು.











