ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ನೇತಾಜಿ ಸರ್ಕಾರಿ ಪ್ರೌಢ ಶಾಲೆ ಕಾಳಾವರದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮದಿಂದ ನಡೆಯುತು. ಗ್ರಾಮಪಂಚಾಯತ್ ಉಪಾಧ್ಯಕ್ಷ ರಾಮಚಂದ್ರ ನಾವಡರು ಧ್ವಜಾರೋಹಣ ನೆರವೇರಿಸಿದರು. ತ್ರಿವರ್ಣ ಧ್ವಜದ ಮಹತ್ವ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನದ ಕುರಿತು ತಿಳಿಸಿದರು.

ಮಕ್ಕಳು ದೇಶಭಕ್ತಿ ಗೀತೆ, ಧ್ವಜಗೀತೆ, ರಾಷ್ಟ್ರ ಗೀತೆ ಹಾಡಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಮುಗಿಲು ಮುಟ್ಟುವ ಘೋಷಣೆ ಕೂಗಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಗ್ರಾಮಪಂಚಾಯತ್ ಸದಸ್ಯರು , ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಪಂಚಾಯತ್, ಹಳೆ ವಿದ್ಯಾರ್ಥಿಗಳು ಹಾಗೂ ಊರಿನ ದಾನಿಗಳಿಂದ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು. ಮುಖ್ಯೋಪಾಧ್ಯಾಯಿನಿ ಗಾಯತ್ರಿ ಅಡಿಗರವರು ಸ್ವಾಗತಿಸಿದರು. ಶಿಕ್ಷಕ ಗಣೇಶ ಶೆಟ್ಟಿಗಾರ್ ವಂದಿಸಿದರು. ಬಳಿಕ ಮಕ್ಕಳ ಪುರಮೆರವಣಿಗೆ ನಡೆಯಿತು. ದಾರಿಯುದ್ದಕ್ಕೂ ಗ್ರಾಮಸ್ಥರು ಪೋಷಕರು ಮಕ್ಕಳನ್ನು ಸ್ವಾಗತಿಸಿ ಸಿಹಿತಿಂಡಿ ವಿತರಿಸಿದರು.











