ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಆಗಸ್ಟ್ 15 : ದೇಶದ ಸ್ವಾತಂತ್ರ್ಯೋತ್ಸವದ 75ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಕುಂದಾಪುರ ಇದರ ಅಂಗ ಸಂಸ್ಥೆಗಳಾದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಮತ್ತು ಆರ್. ಎನ್. ಶೆಟ್ಟಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಆಜಾದಿ ಕಾ ಅಮೃತ್ ಮಹೋತ್ಸವದ ಬೃಹತ್ ಜಾಥಾ ಹಮ್ಮಿಕೊಳ್ಳಲಾಯಿತು.
ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಇದರ ಸಂಚಾಲಕರು ಹಾಗೂ ಬೈಂದೂರಿನ ಶಾಸಕರಾದ ಬಿ.ಎಂ. ಸುಕುಮಾರ್ ಶೆಟ್ಟಿಯವರು ರ್ಯಾಲಿಗೆ ಚಾಲನೆ ನೀಡಿ ಶುಭಹಾರೈಸಿದರು.
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕ್ಯಾಂಪಸ್ ನಿಂದ ಹೊರಟ ಬೃಹತ್ ರ್ಯಾಲಿ ಕುಂದಾಪುರದ ಶಾಸ್ತ್ರಿ ಸರ್ಕಲ್‍ನಿಂದ ಪಾರಿಜಾತ ಸರ್ಕಲ್‍ವರೆಗೂ ಕ್ರಮಿಸಿತು. ಎರಡು ಸಾವಿರಕ್ಕೂ ಮಿಕ್ಕಿ ವಿದ್ಯಾರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಿ, ದೇಶಭಕ್ತಿಯ ಘೋಷವಾಕ್ಯವನ್ನು ಕೂಗುತ್ತಾ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಮೆರುಗನ್ನು ಹೆಚ್ಚಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಆರ್ ಎನ್ ಶೆಟ್ಟಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನವೀನ್ ಕುಮಾರ್ ಶೆಟ್ಟಿ ಹಾಗೂ ಎರಡು ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಈ ಜಾಥಾದಲ್ಲಿ ಭಾಗಿಯಾದರು.











