ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಸರಸ್ವತಿ ವಿಗ್ರಹ ಪ್ರತಿಷ್ಠಾಪನೆ

0
545

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇದರ ಪ್ರಾಂಗಣದಲ್ಲಿ ವಿದ್ಯಾದೇವತೆ ಸರಸ್ವತಿ ದೇವರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಆಗಸ್ಟ್ 15ರಂದು ನೆರವೇರಿತು.

ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿ ಮಾತನಾಡಿ ಸರಸ್ವತಿ ಮಾತೆಯು ಎಲ್ಲರಿಗೂ ಅನುಗ್ರಹಿಸಲಿ, ಕಾಲೇಜು ಇನ್ನಷ್ಟು ಹೆಚ್ಚಿನ ಶೈಕ್ಷಣಿಕ ಸಾಧನೆಗೈಯಲಿ ಎಂದು ಶುಭಹಾರೈಸಿದರು.

Click Here

ಕಾಲೇಜಿನ ಸಂಸ್ಕೃತ ವಿಭಾಗದ ಉಪನ್ಯಾಸಕರಾದ ವೇದಮೂರ್ತಿ ಗಣೇಶ್ ಭಟ್‍ರವರು ವಿಗ್ರಹ ಪ್ರತಿಷ್ಠಾಪನೆಯ ವಿಧಿ-ವಿಧಾನಗಳನ್ನು ನೆರವೇರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here