ಎಕ್ಸಲೆಂಟ್ ಕುಂದಾಪುರ :ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಅವಿಸ್ಮರಣಿಯ – ಕ್ಯಾಪ್ಟನ್ ಗಣೇಶ್ ಕಾರ್ಣಿಕ್

0
564
????????????????????????????????????

Click Here

Click Here

ಸುಣ್ಣಾರಿಯ ಎಕ್ಸಲೆಂಟ್ ಸ್ಕೂಲ್ ಮತ್ತು ಕಾಲೇಜು ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಆಚರಣೆ, ನಿವೃತ್ತ ಯೋಧರಿಗೆ ಸನ್ಮಾನ:

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಸುಣ್ಣಾರಿಯ ಎಕ್ಸಲೆಂಟ್ ಸ್ಕೂಲ್ ಮತ್ತು ಕಾಲೇಜು ವತಿಯಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮುಖ್ಯ ಅಥಿತಿಗಳಾಗಿ ಆಗಮಿಸಿ ಧ್ವಜರೋಹಣವನ್ನು ನೆರವೇರಿಸಿದ ಮಾಜಿ ವಿಧಾನ ಪರಿಷತ್ ಸದಸ್ಯರಾದ ಗಣೇಶ್ ಕಾರ್ಣಿಕ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರತಿಯೊಬ್ಬರು ಭಾರತ ಮಾತೆಗೆ ಧನ್ಯರಾಗಿರಬೇಕು. ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಂಡ ಸ್ವಾತಂತ್ರ ಯೋಧರು, ದೇಶ ಕಾಯುವ ಸೈನಿಕರು, ಅನ್ನ ನೀಡುವ ರೈತರ ತ್ಯಾಗ ಬಲಿದಾನಗಳನ್ನು ಸ್ಮರಿಸುತ್ತಾ ಸಾಗಿದಾಗ ಪ್ರತಿ ನಿತ್ಯ ನಮ್ಮ ಮನದಲ್ಲಿ ದೇಶದ ಬಗ್ಗೆ ಕಾಳಜಿ ಮತ್ತು ದೇಶ ಪ್ರೇಮ ಉಳಿಯುತ್ತದೆ ಎಂದರು.

Click Here

ಈ ಸಂದರ್ಭದಲ್ಲಿ ದೇಶದ ಸೈನ್ಯದಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಮಾಜಿ ಯೋಧರಾದ ಲೆಫ್ಟಿನೆಂಟ್ ಕರ್ನಲ್ ಎಂ. ಕೆ ಶೆಟ್ಟಿ, ರವಿಚಂದ್ರ ಶೆಟ್ಟಿ, ಆನಂದ ಶೆಟ್ಟಿ, ಭಾಸ್ಕರ ಭೋವಿ, ಶ್ರೀಧರ ಮರಕಾಲ, ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‍ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿಯವರು ವಹಿಸಿಕೊಂಡರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಂಸ್ಥೆಯ ಕಾರ್ಯದರ್ಶಿಗಳಾದ ಪ್ರತಾಪ್‍ಚಂದ್ರ ಶೆಟ್ಟಿ, ಖಜಾಂಚಿಗಳಾದ ಭರತ್ ಶೆಟ್ಟಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಎಕ್ಸಲೆಂಟ್ ಶಾಲಾ ಮುಖ್ಯ ಶಿಕ್ಷಕಿಯಾದ ಸುರೇಖಾ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗಾಗಿ ದೇಶಭಕ್ತಿ ಗೀತೆ ಗಾಯನ ಮತ್ತು ಸಾಂಸ್ಕ್ರತಿಕ ವೈಭವವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಒಳಗೊಂಡಿದ್ದು ಎರಡು ಸಾವಿರಕ್ಕೂ ಹೆಚ್ಚು ಜನ ಭಾಗಿಗಳಾಗಿ ಕಾರ್ಯಕ್ರಮಕ್ಕೆ ಮೆರುಗನ್ನು ತಂದಿದ್ದು, ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಪ್ರಕಾಶ್ ಆಚಾರ್ಯ ಕಾರ್ಯಕ್ರಮವನ್ನು ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here