ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಆ.23ರಂದು ಸ.ಹಿ.ಪ್ರಾ.ಶಾಲೆ ನೂಜಾಡಿ-1 ಇಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ, ಬಾಲಕಿಯರ ತಂಡ ಗೆಲುವು ಸಾಧಿಸಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್ ತರಬೇತಿ ನೀಡಿದ್ದು, ಮುಖ್ಯೋಪಾಧ್ಯಾಯರು, ಶಿಕ್ಷಕವೃಂದ ಸಹಕಾರ ನೀಡಿದ್ದರು. ವಿಜೇತ ವಿದ್ಯಾರ್ಥಿಗಳನ್ನು ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರು, ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ವಿದ್ಯಾಭಿಮಾನಿಗಳು ಅಭಿನಂದಿಸಿದರು.











