ಎಕ್ಸಲೆಂಟ್ ಕುಂದಾಪುರ: ನಾಲ್ಕು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ, ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಮೂರು ಪದಕ

0
1329

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪು : ಸುಣ್ಣಾರಿಯ ಎಕ್ಸಲೆಂಟ್ ಸ್ಕೂಲ್ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮಟ್ಟ ಮತ್ತು ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಸಾಧನೆಗೈಯುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಚಾಪನ್ನು ಮೂಡಿಸುತ್ತಿದ್ದಾರೆ ಎಂದು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‍ನ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೇಶ್ ಶೆಟ್ಟಿ ತಿಳಿಸಿದರು.

ಅವರು ಆ.25ರಂದು ಸುಣ್ಣಾರಿಯ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಸುದ್ಧಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

Click Here

ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರು ಆಯೋಜಿಸಿರುವ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಚದುರಂಗ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳಾದ ಮಾನಸ ಪ್ರಥಮ ಸ್ಥಾನಿಯಾಗಿ ಹಾಗೂ ನಿಹಾಲ್ ಎನ್ ಶೆಟ್ಟಿ ತೃತೀಯ ಸ್ಥಾನಿಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಉಡುಪಿ ಜಿಲ್ಲೆಯಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿರುವ ಏಕೈಕ ಕಾಲೇಜು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.
ಉಡುಪಿ ಜಿಲ್ಲಾ ಮಟ್ಟದ ಶಿಕ್ಷಣ ಇಲಾಖೆ ಆಯೋಜಿಸಿದ ಚದುರಂಗ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪ್ರೌಢ ಶಾಲಾ ವಿದ್ಯಾರ್ಥಿಗಳಾದ ತತ್ವ ಶೆಟ್ಟಿ ಮತ್ತು ಪ್ರಕೃತಿ ಪಿ ಶೆಟ್ಟಿ ಇವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಚದುರಂಗ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಸಮೂಹ ಸಂಸ್ಥೆಯ ನಾಲ್ಕು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದರು.

ಶಿವಮೊಗ್ಗದಲ್ಲಿ ನಡೆದ ಓಪನ್ 3ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವಿಶ್ಲೇಶ್ ನಾಯಕ ಕುಮಟೆ ವಿಭಾಗದಲ್ಲಿ ಚಿನ್ನದ ಪದಕ, ಕಟಾ ವಿಭಾಗದಲ್ಲಿ ಚಿನ್ನದ ಪದಕ, ಮೊಹಮ್ಮದ್ ಅನೀಸ್ ಕುಮಟೆ ವಿಭಾಗದಲ್ಲಿ ಬೆಳ್ಳಿ ಪದಕ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದರೆ, ಆಯುಷ್ ಪುತ್ರನ್ ಇವರು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ಕುಮಟೆ ವಿಭಾಗದಲ್ಲಿ ಕಂಚಿನ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ ಎಂದು ಹೇಳಿದರು.
ಈ ಭಾಗದ ವಿದ್ಯಾರ್ಥಿಗಳನ್ನು ಕ್ರೀಡಾ ಕ್ಷೇತ್ರದಲ್ಲಿ ಹುರಿದುಂಬಿಸುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಪಿಯುಸಿ ವಿಭಾಗದ ವಾಲಿಬಾಲ್ ಪಂದ್ಯಾಟವನ್ನು ಆಯೋಜಿಸುತ್ತಿದ್ದೇವೆ. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಅವರ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆಗಳನ್ನು ನೀಡಲಾಗುತ್ತಿದೆ. ನಮ್ಮ ಸಂಸ್ಥೆ ಶಿಕ್ಷಣ, ಕಲ್ಬರಲ್ ಮತ್ತು ಸ್ಪೋಟ್ಸ್‍ನಲ್ಲಿ ಟ್ಯಾಲೆಂಟ್ ಇದ್ದ ವಿದ್ಯಾರ್ಥಿಗಳಿಗೆ ಫ್ರೀ ಎಜುಕೇಶನ್ ಫೇಸಿಲಿಟಿಯನ್ನು ಈ ಭಾಗದ ವಿದ್ಯಾರ್ಥಿಗಳಿಗೆ ಸಹಕಾರಿಯಾಗುವ ರೀತಿಯಲ್ಲಿ ಸಮಾಜಮುಖಿಯಾಗಿ ಸಮಾಜದೊಂದಿಗೆ ಕೆಲಸ ಮಾಡಲಾಗುತ್ತಿದೆ ಎಂದರು.

ಸುದ್ಧಿಗೋಷ್ಠಿಯಲ್ಲಿ ಸಂಸ್ಥೆಯ ಕೋಶಾಧಿಕಾರಿ ಭರತ್ ಶೆಟ್ಟಿ, ಹಾಗೂ ಶಿಕ್ಷಕರಾದ ಸತೀಶ, ಜಯಲತಾ, ನಾಗರಾಜ ಶೆಟ್ಟಿ ಹಾಗೂ ವಿಜೇತ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here