ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಸರ್ಕಾರಿ ಪ್ರೌಢ ಶಾಲೆ ಕಾಳಾವರದಲ್ಲಿ ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ ಶಿಕ್ಷಕ ದಿನಾಚರಣೆ ಆಚರಿಸಿದರು. ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ವಿದ್ಯಾರ್ಥಿಗಳು ಸಭಾ ಕಾರ್ಯಕ್ರಮ ಏರ್ಪಡಿಸಿದ್ದರು. ಸಭೆಯ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯಿನಿ ಗಾಯತ್ರಿ ಅಡಿಗರವರು ವಹಿಸಿದ್ದರು.
ಮಕ್ಕಳು ಸ್ವತಃ ವಿನ್ಯಾಸಗೊಳಿಸಿದ ಶುಭಾಶಯ ಕಾರ್ಡ್ ನೀಡುವುದರ ಮೂಲಕ ಶಿಕ್ಷಕರನ್ನು ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕರಿಸಲ್ಪಡುವ ಗಣೇಶ ಶೆಟ್ಟಿಗಾರರನ್ನು ವಿದ್ಯಾರ್ಥಿಗಳ ಪರವಾಗಿ ಅಭಿನಂದಿಸಲಾಯಿತು.
ಶಾಲಾ ವಿದ್ಯಾರ್ಥಿ ನಾಯಕ ಸುಜಿತ್ ಹಾಗೂ ಸಂಧ್ಯಾ ಅಭಿನಂದನಾ ಭಾಷಣ ಮಾಡಿದರು. ವಿದ್ಯಾರ್ಥಿಗಳ ಗೌರವಕ್ಕೆ ಪ್ರತಿಯಾಗಿ ಶಿಕ್ಷಕ ಗಣೇಶ ಶೆಟ್ಟಿಗಾರ್, ರವಿರಾಜ್ ಶೆಟ್ಟಿ, ದಿನೇಶ್ ಪ್ರಭು ಕೃತಜ್ಞತಾ ಭಾಷಣ ಮಾಡಿದರು.











