ಕುಂದಾಪುರದಲ್ಲಿ ಶಿಕ್ಷಕರ ದಿನಾಚರಣೆ
ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಕರ ಬಗ್ಗೆ ಅಪಾರ ಗೌರವ ಹೊಂದಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಅಧ್ಯಯನ ನಡೆಸಿದ್ದ ಅವರ ನೆನಪಿಗಾಗಿ ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಸ್. ವಿಜಯ ಪೂಜಾರಿ ಹೇಳಿದರು.
ಅವರು ಸೋಮವಾರ ಕುಂದಾಪುರದ ಶ್ರೀ ವ್ಯಾಸರಾಜ ಕಲ್ಯಾಣ ಮಂಟಪದಲ್ಲಿ ನಡೆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಅಧ್ಯಕ್ಷತೆ ವಹಿಸಿದ್ದರು.
ಶಿಕ್ಷಕರ ದಿನಾಚರಣೆ ಆಚರಣೆ ಸಮಿತಿಯ ಅಧ್ಯಕ್ಷ ತಾ.ಪಂ, ಕಾರ್ಯನಿರ್ವಹಣಾಧಿಕಾರಿ ಮಹೇಶ್‍ಕುಮಾರ ಹೊಳ್ಳ, ಕುಂದಾಪುರ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಅಶೋಕ ನಾಯ್ಕ್, ಕುಂದಾಪುರ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶಕುಮಾರ ಶೆಟ್ಟಿ, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ಶೆಟ್ಟಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಉದಯಕುಮಾರ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಪ್ರೌಢಶಾಲೆ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷೆ ಜ್ಯೋತಿ ಬಿ., ತಾಲೂಕು ಯುವಜನ ಸೇವೆ ಮತ್ತು ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಅನುದಾನಿತ ಪ್ರೌಢಶಾಲೆ ಸಹಶಿಕ್ಷಕರ ಸಂಘದ ಅಧ್ಯಕ್ಷ ಜಯಶೀಲ ಶೆಟ್ಟಿ, ತಾಲೂಕು ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ ಕುಂಭಾಸಿ, ಟೀಚರ್ಸ್ ಕೋ-ಅಪರೇಟಿವ್ ಬ್ಯಾಂಕಿನ ನಿರ್ದೇಶಕ ಕಿಶನ್‍ರಾಜ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭ ಪ್ರಶಸ್ತಿ ವಿಜೇತ ಶಿಕ್ಷಕರು, ನಿವೃತ್ತ ಶಿಕ್ಷಕರು ಸಹಿತ 43 ಮಂದಿ ಶಿಕ್ಷಕರನ್ನು ಗುರುತಿಸಿ ಗೌರವಿಸಲಾಯಿತು. ಸಹಶಿಕ್ಷಕ ರಾಜೇಶ್ ಪ್ರಾರ್ಥಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಅರುಣ್‍ಕುಮಾರ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಿಆರ್‍ಪಿ ಸಂತೋಷ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಜಡ್ಡಿನಗದ್ದೆ ಶಾಲೆ ಅಧ್ಯಾಪಕ ಶಶಿಧರ ಶೆಟ್ಟಿ ವಂದಿಸಿದರು.











