ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯೊಂದಿಗೆ ಕ್ಲೀನ್ ಕುಂದಾಪುರ ಪ್ರಾಜೆಕ್ಟ್‍ನ ಸಹಕಾರದಲ್ಲಿ ಕುಂದಾಪುರ ಪುರಸಭೆ, ಮರವಂತೆ ಗ್ರಾಮ ಪಂಚಾಯತ್, ಬೈಂದೂರು ಪಟ್ಟಣ ಪಂಚಾಯತ್, ಸೇವಾ ಸಂಗಮ ಟ್ರಸ್ಟ್, ರಾಷ್ಟ್ರಸೇವಿಕಾ ಸಮಿತಿ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರ, ಎಫ್‍ಎಸ್‍ಎಲ್ ಇಂಡಿಯಾ, ಕರಾವಳಿ ಕಾವಲು ಪೆÇಲಿಸ್ ಪಡೆ, ಅರಣ್ಯ ಇಲಾಖೆ, ಇನ್ನಿತರ ಸಂಘ-ಸಂಸ್ಥೆಗಳ ಜೊತೆಗೂಡಿ ಅಂತರಾಷ್ಟ್ರೀಯ ಕರಾವಳಿ ಸ್ವಚ್ಛತಾ ಅಭಿಯಾನ ದಿನವನ್ನು ಕೋಡಿ ಹಾಗೂ ಮರವಂತೆ ಕಡಲು ತೀರದಲ್ಲಿ ಬೃಹತ್ ಆಗಿ ಸ್ವಚ್ಛತಾ ಕಾರ್ಯವು ದಿನಾಂಕ 17 ಸೆಪ್ಟಂಬರ್ ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಲಿದೆ.
ಈ ಅಭಿಯಾನದಲ್ಲಿ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬೈಂದೂರು ಶಾಸಕ ಬಿ ಎಂ ಸುಕುಮಾರ ಶೆಟ್ಟಿ, ಕುಂದಾಪುರ ಪುರಸಭೆಯ ಅಧ್ಯಕ್ಷೆ ವೀಣಾ ಭಾಸ್ಕರ್, ಜಿಲ್ಲಾಧಿಕಾರಿ ಕೂರ್ಮರಾವ್, ಪ್ರವಾಸೋದ್ಯಮ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಮೊಹಮ್ಮದ್ ಫಾರೂಕ್, ಇಂಡಿಯನ್ ಕೋಸ್ಟಲ್ ಗಾರ್ಡ್ ನ ಡಿಐಜಿ ಎಸ್. ಬಾಬು ವೆಂಕಟೇಶ್, ಕರಾವಳಿ ಕಾವಲು ಪಡೆಯ ಉಡುಪಿ ಜಿಲ್ಲಾ ಪೋಲಿಸ್ ಅಧೀಕ್ಷಕ ಅಬ್ದುಲ್ ಆಹದ್, ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿ ಡಾ. ಆಶಿಶ್ ರೆಡ್ಡಿ, ಉಡುಪಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕ್ಲಿಫರ್ಡ್ ಲೋಬೋ, ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.
ಸಾಗರ ಉಳಿಸಿ ಅಭಿಯಾನದಲ್ಲಿ ಪರಿಸರಾಸಕ್ತ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ವಿನಂತಿಸಿದೆ.











