ಕುಂದಾಪುರ ಮಿರರ್ ಸುದ್ದಿ…
ಕೋಟ: ಕೆನರಾ ಬ್ಯಾಂಕ್ ಮಹಿಳಾ ಉದ್ಯಮಶೀಲತಾ ವಿಕಾಸ ಕೇಂದ್ರ ಸರ್ಕಲ್ ಕಛೇರಿ ಮಣಿಪಾಲ ಇವರ ಪ್ರಾಯೋಜಕತ್ವದಲ್ಲಿ ಕಾನೂನು ಅರಿವು ಮತ್ತು ಡಿಜಿಟಲ್ ಆನ್ ಲೈನ್ ವ್ಯವಹಾರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಗಾರ ಇತ್ತೀಚಿಗೆ ಶ್ರೀ ದುರ್ಗಾ ಪರಮೇಶ್ವರಿ ಕಲ್ಯಾಣ ಮಂಟಪ ಹಾಲ್ ತೆಕ್ಕಟ್ಟೆ ಇಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆನರಾ ಬ್ಯಾಂಕ್ ಸರ್ಕಲ್ ಕಛೇರಿ ಮಣಿಪಾಲ ಇದರ ಜನರಲ್ ಮ್ಯಾನೇಜರ್ ರಾಮ ನಾಯ್ಕ ಕೆ ವಹಿಸಿದ್ದರು.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಧೀಶೆ ಶರ್ಮಿಳಾ ಎಸ್ ಉದ್ಘಾಟಿಸಿ ಮಾತನಾಡಿ ಕಾನೂನಿನ ಬಗ್ಗೆ ಪ್ರತಿಯೊಬ್ಬರಿಗೂ ಮಾಹಿತಿ ಹಾಗೂ ಗೌರವ. ಇರಬೇಕಾದ ಅಗತ್ಯತೆಯನ್ನು ಮನಗಾಣಿಸಿದರಲ್ಲದೆ ಪ್ರಸ್ತುತ ವಿದ್ಯಾಮಾನಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.ಬ್ಯಾಂಕಿಂಗ್ ಕ್ಷೇತ್ರದ ಬಗ್ಗೆ ಕೆನರಾ ಬ್ಯಾಂಕ್ ಉಡುಪಿ ಇದರ ಪ್ರಭಂಧಕಿ ಲೀನಾ ಪಿಂಟೋ ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವೀಣಾ ವಿವೇಕಾನಂದ,ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಇಲಾಖೆ ವ್ಯವಸ್ಥಾಪಕ ಅವಿನಾಶ್, ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟ ಅಧ್ಯಕ್ಷೆ ಜಿಲ್ಲೆ ಶೋಭಾ ಕಲ್ಕೂರ,ಸಮಾಜ ಸೇವಕಿ ತಿಲೋತ್ತಮೆ , ಚೈತನ್ಯ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟ ಉಡುಪಿ ಜಿಲ್ಲೆ ,ಶ್ರೀ ಲಕ್ಷ್ಮೀ ಸ್ವಸಹಾಯ ಸಂಘ ತೆಕ್ಕಟ್ಟೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸ್ತ್ರೀ ಶಕ್ತಿ ತಾಲೂಕು ಒಕ್ಕೂಟದ ಅಮೃತಾ ಸ್ವಾಗತಿಸಿದರು. ಕಾರ್ಯಕ್ರಮವನ್ನು ಅಂಗನವಾಡಿ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಫಿಲೋಮಿನಾ ಫರ್ನಾಂಡೀಸ್ ನಿರೂಪಿಸಿದರು. ಸ್ತ್ರೀ ಶಕ್ತಿ ಜಿಲ್ಲಾ ಒಕ್ಕೂಟದ ಕಾರ್ಯದರ್ಶಿ ಪ್ರೇಮಾ ವಂದಿಸಿದರು.











