ಕುಂದಾಪುರ ಮಿರರ್ ಸುದ್ದಿ…
ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘ ಕೋಟ ಇದರ 65ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಸೆ.18.ರಂದು ವಿವೇಕ ಪದವಿ ಪೂರ್ವ ಕಾಲೇಜು ಕೋಟ ಇದರ ಮಹಾತ್ಮಾ ಗಾಂಧಿ ಸಭಾ ಭವನದಲ್ಲಿ ನಡೆಯಿತು.
ಸಂಘದ ಮಾಜಿ ಅಧ್ಯಕ್ಷ ಭೋಜ ಹೆಗ್ಡೆ ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಯನ್ನು, ಶಾಖಾ ಸಲಹಾ ಸಮಿತಿ ಸದಸ್ಯ ಕೃಷ್ಣ ಹಂದೆ ಗುಣಮಟ್ಟದ ಅಡಿಕೆ ಸಸಿಗಳ ಮಾರಾಟ ಸ್ಟಾಲ್‍ನ್ನು ಮತ್ತು ವಿವೇಕ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಜಗದೀಶ ನಾವಡ ಸಕಲ ಕೃಷಿ ಉಪಕರಣಗಳ ಮಾರಾಟ ಮಳಿಗೆಯನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಸಂಘದ ಮಾಜಿ ನಿರ್ದೇಶಕ ಶೇಖರ ಶೆಟ್ಟಿ ಮತ್ತು ನಿವೃತ್ತ ಉಪನ್ಯಾಸಕರಾದ ಅರುಣಾಚಲ ಮಯ್ಯ ಇವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಸಭೆಯಲ್ಲಿ ಪ್ರಥಮವಾಗಿ ಹಿರಿಯ ಸದಸ್ಯರುಗಳನ್ನು ಸನ್ಮಾನಿಸಲಾಯಿತು. ಡಾಕ್ಟರೇಟ್ ಪದವಿ ಪಡೆದ ಡಾ. ಕೆ. ಜಗದೀಶ ಹೊಳ್ಳ, ಡಾ. ಅನಿಲ್ ಕುಮಾರ್ ಶೆಟ್ಟಿ, ಡಾ. ಪಿ. ಬಾಲಕೃಷ್ಣ ನಕ್ಷತ್ರಿ, ಡಾ. ಸಬಿತಾ ಗುಂಡ್ಮಿ, ಡಾ. ಗಜೇಂದ್ರ ಗುಳ್ಳಾಡಿ, ಡಾ. ಗಗನ ಹೇರ್ಳೆ ಮತ್ತು ಜೀ ಕನ್ನಡ ವಾಹಿನಿಯ ಡ್ರಾಮಾ ಜ್ಯೂನಿಯರ್ ಸ್ಪರ್ಧೆಯ ವಿಜೇತೆ ಕುಮಾರಿ ಸಮೃದ್ಧಿ ಇವರನ್ನು ಅಭಿನಂದಿಸಲಾಯಿತು.
ಸಂಘದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ವ್ಯವಸ್ಥಾಪಕ ಶ್ರೀಧರ ಆಚಾರ್, ಜಯಶೀಲ ಮತ್ತು ಹಿರಿಯ ಸಹಾಯಕಿ ಲೀಲಾವತಿ ಇವರನ್ನು ಹಾಗೂ 2020-21ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಬೆಳೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಪ್ರೇಮಾ ಟಿ. ಪೂಜಾರಿ ಇವರನ್ನು ಸನ್ಮಾನಿಸಲಾಯಿತು.
ಇದೇ ಸಂದರ್ಭ ಸಂಘದಲ್ಲಿ ಅತ್ಯುತ್ತಮ ವ್ಯವಹಾರ ನಡೆಸಿದ ಶಾಖೆಗಳನ್ನು ಘೋಷಿಸಲಾಯಿತು. ಸಂಘದಿಂದ ಜರುಗಿಸಿದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಗಾರದಲ್ಲಿ ವಿಜೇತರಾದ ಶಾಖೆಗಳು ಮತ್ತು ಗ್ರಾಹಕರಾಗಿ ಭಾಗವಹಿಸಿ ವಿಜೇತರಾದ ಸದಸ್ಯರನ್ನು ಪುರಸ್ಕರಿಸಲಾಯಿತು. ಸಂಘದ ಕಾರ್ಯವ್ಯಾಪ್ತಿಯ ಶಾಲೆಗಳ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ.ಯಲ್ಲಿ ಅಧಿಕ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ಹರ
ಪ್ರೋತ್ಸಾಹ ಧನ ನೀಡಿ ಪುರಸ್ಕರಿಸಲಾಯ್ತು. ಅಂಗವಿಕಲ ದತ್ತಿನಿಧಿ ಮತ್ತು ಅರ್ಹ ಫಲಾನುಭವಿಗಳಿಗೆ ಸಹಾಯಧನ ವಿತರಿಸಲಾಯ್ತು.
ಸಂಘದ ಅಧ್ಯಕ್ಷ ಜಿ. ತಿಮ್ಮ ಪೂಜಾರಿಯವರ ಅಧ್ಯಕ್ಷತೆ ವಹಿಸಿ 2021-22ನೇ ಸಾಲಿನ ವರದಿಯನ್ನು ವಾಚಿಸಿ, ಸಂಘವು 13 ಶಾಖೆಗಳನ್ನು ಹೊಂದಿ ಉತ್ತಮ ಪ್ರಗತಿ ಸಾಧಿಸಿ, ರೂ.167.32 ಕೋಟಿ ಠೇವಣಿ, ರೂ.121.58 ಕೋಟಿ ಸಾಲ ಹೊರಬಾಕಿಯಿದ್ದು, ರೂ.185ಕೋಟಿಗೂ ಮಿಕ್ಕಿ ದುಡಿಯುವ ಬಂಡವಾಳವನ್ನು ಸಂಗ್ರಹಿಸಿದೆ. ವರದಿ ಸಾಲಿನಲ್ಲಿ ರೂ.622 ಕೋಟಿಗೂ ಮಿಕ್ಕಿ ವ್ಯವಹಾರ ಮಾಡಿ ರೂ.3.25ಕೋಟಿಗೂ ಮಿಕ್ಕಿ ನಿವ್ವಳ ಲಾಭ ಗಳಿಸಿ ಸಂಘದ ಸದಸ್ಯರಿಗೆ ಶೇ.15ರ ಡಿವಿಡೆಂಡ್ ಘೋಷಿಸಿರುವುದಾಗಿ ಸಭೆಗೆ ತಿಳಿಸಿದರು.
ಸಂಘದ ಉಪಾಧ್ಯಕ್ಷ ಜಿ. ರಾಜೀವ ದೇವಾಡಿಗ, ನಿರ್ದೇಶಕರುಗಳಾದ ಕೆ. ಉದಯ ಕುಮಾರ್ ಶೆಟ್ಟಿ,ಡಾ. ಕೆ. ಕೃಷ್ಣ ಕಾಂಚನ್, ರವೀಂದ್ರ ಕಾಮತ್, ಮಹೇಶ ಶೆಟ್ಟಿ, ರಾಜೇಶ್ ಉಪಾಧ್ಯ, ಗೀತಾ ಶಂಭು ಪೂಜಾರಿ, ನಾಗರಾಜ ಹಂದೆ, ಪ್ರೇಮಾ ಎಸ್. ಪೂಜಾರಿ, ರಂಜಿತ್ ಕುಮಾರ್, ರಶ್ಮಿತಾ, ಬಿ. ವಸಂತ ಶೆಟ್ಟಿ, ಕೆ. ಶ್ರೀಕಾಂತ ಶೆಣೈ ಮತ್ತು ಗುಲಾಬಿ ಬಂಗೇರ ಉಪಸ್ಥಿತರಿದ್ದರು.
ಕುಮಾರಿ ನಿಶಾ ಪ್ರಾರ್ಥಿಸಿದರು. ಸಂಘದ ನಿರ್ದೇಶಕ ಟಿ. ಮಂಜುನಾಥ ವಾರ್ಷಿಕ ಸರ್ವರನ್ನು ಸ್ವಾಗತಿಸಿದರು. ಸಂಘದ ಸಿಬ್ಬಂದಿ ಸುಶೀಲ ಮತ್ತು ಶಾಲಿನಿ ಹಂದೆ ಕಾರ್ಯಕ್ರಮ ನಿರೂಪಿಸಿದರುಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ ಕುಮಾರ್ ಶೆಟ್ಟಿ ಧನ್ಯವಾದ ಸಮರ್ಪಿಸಿದರು.











