ಕುಂದಾಪುರ ಮಿರರ್ ಸುದ್ದಿ…
ಬೈಂದೂರು : ಬಿಜೆಪಿ ಯುವ ಮೋರ್ಚಾ, ಬೈಂದೂರು ಬಿಜೆಪಿ ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಜನ್ಮದಿನಾಚರಣೆ ಅಂಗವಾಗಿ ಸೇವಾ ಪಾಕ್ಷಿಕ ಆಶ್ರಯದಲ್ಲಿ ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ “ಬೃಹತ್ ರಕ್ತದಾನ ಶಿಬಿರ” ಗುರುವಾರ ಬೈಂದೂರು ಬಂಟರ ಸಮುದಾಯದ ಭವನದಲ್ಲಿ ನಡೆಯಿತು.


ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಉದ್ಘಾಟಿಸಿ, ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ದೇಶ ಕಂಡ ಒಬ್ಬ ಅಪ್ರತೀಮ ಧಿಮಂತ ನಾಯಕ ಭಾರತ ಅವರ ನಾಯಕತ್ವದಲ್ಲಿ ಜಗತ್ತಿನ ಒಂದು ಬಲಿಷ್ಟ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ, ಅವರ ಹುಟ್ಟು ಹಬ್ಬದ ಪ್ರಯುಕ್ತ ಪಕ್ಷವು ವಿವಿಧ ಸಮಾಜ ಸೇವಾ ಕಾರ್ಯಗಳನ್ನು ರಾಜ್ಯಾದ್ಯಾಂತ ಹಮ್ಮಿಕೊಂಡಿದೆ. ಇಡೀ ವಿಶ್ವವೇ ಇಂದು ಭಾರತಕಡೆಗೆ ತಿರುಗಿ ನೋಡುತ್ತಿದೆ ಎಂದರೆ ಅದಕ್ಕೆ ಮೋದಿಜಿ ಅವರು ನಡೆಸಿರುವ ಉತ್ತಮ ಆಡಳಿ ಕಾರ್ಯವೇ ಕಾರಣವಾಗಿ ಅಂತಹ ದೇವತಾ ಪುರುಷ ಮಹಾನ್ ವ್ಯಕ್ತಿಯ ಜನ್ಮದಿನದಂದು ಬಿಜೆಪಿ ಕಾರ್ಯಕರ್ತರು ರಕ್ತದಾನ ಶಿಬಿರ ಆಯೋಜಿಸಿ ಯಶಸ್ವಿಗೆ ಮುಂದಾಗಿರುವದು ಸಂತಸ ಪಡುವಂತಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷದ ಇನ್ನಷ್ಟು ಗಟ್ಟಿಯಾಗಿ ನೆಲೆಯೂರಲಿ ಮೋದಿಜಿ ಅವರ ಕೊಡುಗೆ ದೇಶಕ್ಕೆ ಇನ್ನಷ್ಟು ಲಭಿಸಲಿ ಎಂದು ಹೇಳಿದರು.
ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ರಕ್ತದಾನ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅನ್ನದಾನ, ವಿದ್ಯಾದಾನ, ನೇತ್ರದಾನ ಹಾಗೂ ರಕ್ತದಾನವು ಅತಂತ್ಯ ಶ್ರೇಷ್ಠವಾದ ಕಾರ್ಯಗಳಾಗಿವೆ. ಪ್ರತಿಯೊಬ್ಬರು ಇಂತಹ ಪ್ರವೃತ್ತಿಯನ್ನು ಬೆಳೆಸಿಕೊಂಡಾಗ ಮಾತ್ರ ಬದುಕು ಸಾರ್ಥಕವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆನಂದ ಖಾರ್ವಿ ಉಪ್ಪುಂದ, ಜಿಲ್ಲಾ ಪ್ರಧಾನ ಖಂಜಾಚಿ ಪ್ರವೀಣ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರವೀಂದ್ರ ಮಡಿವಾಳ, ಸವಿತಾ ಕೋಟ್ಯಾನ್, ರಾಜ್ಯ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರಜ್ವಲ್ ಶೆಟ್ಟಿ ಕಾಲ್ತೋಡು, , ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಮೀಳಾ ಹರೀಶ್,ಮಂಡಲದ ಉಪಾಧ್ಯಕ್ಷ, ವಿನೋದ್ ಭಂಡಾರಿ ಗುಜ್ಜಾಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.
ಬೈಂದೂರು ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅನುರ್ ಮೆಂಡನ್ ಸ್ವಾಗತಿಸಿದರು,
ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರು ಕಾರ್ಯಕ್ರಮ ನಿರೂಪಿಸಿದರು. ಯುವ ಮೋರ್ಚಾ ಉಪಾಧ್ಯಕ್ಷ ಲೋಹಿತ್ ಶೆಟ್ಟಿ ವಂದಿಸಿದರು.
ನೂರಕ್ಕೂ ಅಧಿಕ ರಕ್ತದಾನಿಗಳು ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ್ದರು.











