ಸಾಲಿಗ್ರಾಮ- ಹೆದ್ದಾರಿ ಸಮಸ್ಯೆ: ಸಮಾಲೋಚನಾ ಸಭೆ

0
440

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಳದ ಜ್ಞಾನ ಮಂದಿರದಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿಯ ಕುರಿತು ಸಮಾನ ಮನಸ್ಕರ ವಿಶೇಷ ಸಮಾಲೋಚನಾ ಸಭೆಯು ನಡೆಯಿತು.

Click Here

ಈ ಸಂದರ್ಭದಲ್ಲಿ ಸಾಲಿಗ್ರಾಮ ದೇವಳಗಳ ಮಧ್ಯೆ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಪರಿಹಾರ ಮಾರ್ಗೋಪಾಯಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿದರು. ಸ್ಥಳೀಯ ಅಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಜಂಕ್ಷನ್ ಸಮಸ್ಯೆಗೆ ತಾತ್ಕಾಲಿಕ ಮತ್ತು ದೀರ್ಘಕಾಲದ ಪರಿಹಾರ ಕ್ರಮಗಳನ್ನು ಕೈಗೊಳ್ಳುವರೆ ಮತ್ತು ಈ ಬಗ್ಗೆ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸುವರೆ ಸಭೆಯಲ್ಲಿ ಒಮ್ಮತಕ್ಕೆ ಬರಲಾಯಿತು.

ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಅಧ್ಯಕ್ಷ ಶ್ಯಾಮಸುಂದರ ನಾಯರಿ, ದೇವಳದ ಅಧ್ಯಕ್ಷ ಡಾ.ಕೆ.ಎಸ್.ಕಾರಂತರು, ಕಾರ್ಯದರ್ಶಿ ಪಿ.ಲಕ್ಷ್ಮೀನಾರಾಯಣ ತುಂಗ,ಸಾಲಿಗ್ರಾಮ ಪಟ್ಟಣ ಪಂಚಾಯತಿಯ ಅಧ್ಯಕ್ಷೆ ಸುಲತಾ ಹೆಗ್ಡೆ, ಕೂಟಮಹಾ ಜಗತ್ತಿನ ಉಡುಪಿ ಅಂಗಸಂಸ್ಥೆಯ ಕಾರ್ಯದರ್ಶಿ ರಾಘವೇಂದ್ರ ಹೊಳ್ಳ, ಪ್ರತಾಪ ಶೆಟ್ಟಿ, ನಾಗರಾಜ ಗಾಣಿಗ,ಕಾರ್ಕಡ ಅಚ್ಯುತ ಪೂಜಾರಿ, ರಾಜೇಂದ್ರ ಸುವರ್ಣ, ಸಂಜೀವ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here