ಕುಂದಾಪುರ ಮಿರರ್ ಸುದ್ದಿ…
ಕೋಟ: ಪುರಾಣಪ್ರಸಿದ್ಧ ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಳದಲ್ಲಿ ಶರನ್ನವರಾತ್ರಿ ಅಂಗವಾಗಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಸೋಮವಾರ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ದೇವಳದಲ್ಲಿ ದುರ್ಗಾಹೋಮ, ಸಪ್ತಸತೀ ಪಾರಾಯಣ ಮೊದಲ ದಿನದ ಕಾರ್ಯಕ್ರಮವನ್ನು ರಾಜ್ಯದ ಸಮಾಜಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪತ್ನಿ ಸಹಿತ ಕುಟುಂಬಿಕರು ಈ ಪೂಜೆಯಲ್ಲಿ ಪಾಲ್ಗೊಂಡು ಸಂಪನ್ನಗೊಳಿಸಿಕೊಂಡರು.
ವೇ.ಮೂ.ಮಧುಸೂದನ ಬಾಯರಿ ನೇತ್ರತ್ವದಲ್ಲಿ ವಿವಿಧ ಪೂಜಾ ಕಾರ್ಯಕ್ರಮ ನೆರವೆರಿತು. ಈ ಸಂದರ್ಭದಲ್ಲಿ ದೇವಳದ ಅಧ್ಯಕ್ಷ ಆನಂದ್ ಸಿ ಕುಂದರ್ ಸಚಿವರಿಗೆ ಶಾಲು ಹೊದಿಸಿ ಪ್ರಸಾದ ವಿತರಿಸಿದರು.
ದೇವಳದ ಆಡಳಿತ ಮಂಡಳಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮದೇವ ಐತಾಳ್, ಎಂ ಸುಬ್ರಾಯ ಆಚಾರ್ಯ, ಜಿ.ಸತೀಶ್ ಹೆಗ್ಡೆ,ಚಂದ್ರ ಪೂಜಾರಿ, ಸುಂದರ್ ಕಾರ್ಕಡ, ಮಾಜಿ ಸದಸ್ಯ ಚಂದ್ರ ಆಚಾರ್ಯ, ಜಾನಕಿ ಹಂದೆ, ವಿಶ್ವನಾಥ ಶೆಟ್ಟಿ, ಸುಬ್ರಾಯ ಜೋಗಿ, ಅರ್ಚಕ ಪ್ರತಿನಿಧಿಗಳಾದ ಭಾಸ್ಕರ್ ಜೋಗಿ, ದೇವಳದ ಮ್ಯಾನೇಜರ್ ಗಣೇಶ್ ಹೊಳ್ಳ, ಕೋಟ ಗ್ರಾ.ಪಂ ಸದಸ್ಯ ಸಂತೋಷ್ ಪ್ರಭು ಮತ್ತಿತರರು ಉಪಸ್ಥಿತರಿದ್ದರು.











