ಕುಂದಾಪುರ ಮಿರರ್ ಸುದ್ದಿ…
ಕೋಟ: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ವಡ್ಡರ್ಸೆ ಇವರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 168ನೇ ಜಯಂತೋತ್ಸವ ಅಂಗವಾಗಿ ಸತ್ಯನಾರಾಯಣ ಪೂಜೆ, ಗುರುಪೂಜೆ ಕಾರ್ಯಕ್ರಮ ಗುರುವಾರ ವಡ್ಡರ್ಸೆ ಎಂ.ಜಿ ಕಾಲೋನಿಯಲ್ಲಿ ಜರಗಿತು.
ಈ ಸಂದರ್ಭದಲ್ಲಿ ಬ್ರಹ್ಮಾವರ ತಾಲೂಕು ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಅಧ್ಯಕ್ಷ ಕರುಣಾಕರ ಪೂಜಾರಿ ಮಕ್ಕಿಮನೆ, ಅಚ್ಲಾಡಿ ಹಾಲು ಉತ್ಪಾದಕರ ಸಹಕಾರ ಸಂಘ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂತೋಷ್ ಪೂಜಾರಿ ಇವರಗಳನ್ನು ಸನ್ಮಾನಿಸಲಾಯಿತು.
ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಹಮ್ಮಿಕೊಂಡಿತು. ಸ್ಥಳೀಯ ಸಾಧಕ ಐವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಅತಿಥಿಗಳಾಗಿ ಸಂಘದ ಗೌರವಾಧ್ಯಕ್ಷ ಕೋಟಿ ಪೂಜಾರಿ, ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಕರ್ನಾಟಕ ಇದರ ಉಡುಪಿ ಜಿಲ್ಲಾ ಅಧ್ಯಕ್ಷ ಜಗನ್ನಾಥ ಕೋಟೆ, ಸಂಘಟನಾ ಕಾರ್ಯದರ್ಶಿ ನಿತ್ಯಾನಂದ ಪೂಜಾರಿ ಚಾಂತಾರು, ಸುಂದರ ಪೂಜಾರಿ ಬ್ರಹ್ಮಾವರ ಉಪಸ್ಥಿತಿರಿದ್ದರು.
ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ವಡ್ಡರ್ಸೆ ಅಧ್ಯಕ್ಷೆ ಶಾರದ ರಾಮ ಪೂಜಾರಿ ಮಧುವನ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ನಿರ್ವಹಿಸಿದರು.











