ಕೋಟ – ಕೋಟತಟ್ಟು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆ

0
662

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಕೋಟದ ಮಾಂಗಲ್ಯ ಮಂದಿರದಲ್ಲಿ ಬಿಜೆಪಿ ಕೋಟತಟ್ಟು ಶಕ್ತಿ ಕೇಂದ್ರದ ಪ್ರಮುಖರ ಸಭೆ ಇತ್ತೀಚಿಗೆ ನೆರವೇರಿತು.

ಸಭೆಯ ಅಧ್ಯಕ್ಷತೆಯನ್ನು ಕೋಟತಟ್ಟು ಶಕ್ತಿ ಕೇಂದ್ರದ ಅಧ್ಯಕ್ಷ ಎಚ್ ಪ್ರಮೋದ್ ಹಂದೆ ವಹಿಸಿದರು.

Click Here

ಸಭೆಯಲ್ಲಿ ಬಿಜೆಪಿ ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರು ಮಾತನಾಡಿ ಮುಂದಿನ ದಿನಗಳಲ್ಲಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸೇರಿಸಿ ಎರಡು ಸಭೆಯನ್ನು ಸೇರಿಸಿ ಸರಕಾರದಿಂದ ಸಿಗುವಂತಹ ಜನಪರ ಯೋಜನೆಗಳನ್ನು ಎಲ್ಲರಿಗೂ ತಲುಪುವಂತೆ ಮಾಡಬೇಕು ಹಾಗೂ ಬೂತ ಮಟ್ಟದಲ್ಲಿ ಪಕ್ಷ ಸಂಘಟಸಲು ಕರೆ ಇತ್ತರು.

ಬಿಜೆಪಿ ಕುಂದಾಪುರ ಮಂಡಲದ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಓಬಿಸಿ ಮೋರ್ಚಾ ಮಂಡಲದ ಅಧ್ಯಕ್ಷ ಸತೀಶ್ ಕುಂದರ ಬಾರಿಕೆರೆ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಹಾಗೂ ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಾಸು ಪೂಜಾರಿ ,ಮಾಜಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಬೂತ್ ಅಧ್ಯಕ್ಷರು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here