ಡಾ | ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ – ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪೂರ್ವಪರಿಚಯ ಕಾರ್ಯಕ್ರಮ

0
323

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಕಾಲೇಜಿಗೆ 2022-23ನೇ ಶೈಕ್ಷಣಿಕ ಸಾಲಿನಲ್ಲಿ ನೂತನವಾಗಿ ಸೇರ್ಪಡೆಯಾದ ಪ್ರಥಮ ವರ್ಷದ ಬಿ.ಕಾಂ. ವಿದ್ಯಾರ್ಥಿಗಳಿಗೆ ನೂತನ ಶಿಕ್ಷಣ ನೀತಿಯ ಪಠ್ಯಕ್ರಮದ ಬಗ್ಗೆ ಮಾಹಿತಿ ಒದಗಿಸುವ ದೃಷ್ಠಿಯಿಂದ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಪೂರ್ವಪರಿಚಯ ಕಾರ್ಯಕ್ರಮವನ್ನು ಸೆಪ್ಟೆಂಬರ್ 28 ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಶಿಸ್ತು ಮತ್ತು ಶ್ರಮದ ಅಗತ್ಯೆಗಳ ಕುರಿತು ಮಾತನಾಡಿದರು.

Click Here

ಕಾಲೇಜಿನ ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಮಾತನಾಡಿ ಕಾಲೇಜಿನ ಬಹುಬಗೆಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಅವಶ್ಯಕತೆ ಹಾಗೂ ವಿಭಾಗ ಕಲ್ಪಿಸಿಕೊಡುವ ಅವಕಾಶಗಳ ಕುರಿತು ಮನವರಿಕೆ ಮಾಡಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ವಾಸುದೇವ್ ಭಟ್ ಸ್ವಾಗತಿಸಿ, ವಿಭಾಗದ ಕಾರ್ಯ ಯೊಜನೆಗಳ ಪರಿಚಯ ನೀಡಿದರು. ಉಪನ್ಯಾಸಕಿ ದೀಪಾ ಪೂಜಾರಿ ಕಾಲೇಜು ಹಾಗೂ ವಿಶ್ವವಿದ್ಯಾನಿಲಯದ ಪರೀಕ್ಷಾ ಕ್ರಮದ ಪರಿಚಯ ನೀಡಿದರು. ಉಪನ್ಯಾಸಕಿ ಅರ್ಪಣಾ ಶೆಟ್ಟಿ ವಾಣಿಜ್ಯ ವಿಷಯಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ ಒದಗಿಸಿದರು. ಉಪನ್ಯಾಸಕಿ ಸುಶ್ಮಿತಾ ವಂದಿಸಿದರು. ಉಪನ್ಯಾಸಕಿ ವಿನಯ ವಿ. ಶೆಟ್ಟಿ ನಿರೂಪಿಸಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಪ್ರಥಮ ವರ್ಷದ ಪದವಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಆಯೋಜಿಸುವ ಮೂಲಕ ವಿಶೇಷ ಗಮನ ಸೆಳೆದರು.

Click Here

LEAVE A REPLY

Please enter your comment!
Please enter your name here