ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕಾಲೇಜಿಗೆ 2022-23ನೇ ಶೈಕ್ಷಣಿಕ ಸಾಲಿನಲ್ಲಿ ನೂತನವಾಗಿ ಸೇರ್ಪಡೆಯಾದ ಪ್ರಥಮ ವರ್ಷದ ಬಿಸಿಎ ಮತ್ತು ಬಿಎಸ್ಸಿ ವಿದ್ಯಾರ್ಥಿಗಳಿಗೆ ನೂತನ ಶಿಕ್ಷಣ ನೀತಿಯ ಪಠ್ಯಕ್ರಮದ ಬಗ್ಗೆ ಮಾಹಿತಿ ಒದಗಿಸುವ ದೃಷ್ಟಿಯಿಂದ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾಲೇಜಿನ ಗಣಕ ವಿಜ್ಞಾನ ಮತ್ತು ವಿಜ್ಞಾನ ವಿಭಾಗದ ವತಿಯಿಂದ ಪೂರ್ವ ಪರಿಚಯ ಕಾರ್ಯಕ್ರಮವನ್ನು ಅಕ್ಟೋಬರ್ 15 ರಂದು ಹಮ್ಮಿಕೊಳ್ಳಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಿಗೆ ಐಟಿ ಕ್ಷೇತ್ರದಲ್ಲಿ ಬಹಳಷ್ಟು ಅವಕಾಶಗಳಿದ್ದು, ಕಲಿಕೆಗೆ ಪೂರಕವಾದ ಅನೇಕ ಸೌಲಭ್ಯಗಳು ಕಾಲೇಜಿನಲ್ಲಿ ಇವೆ, ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು. ಗಣಕ ವಿಭಾಗದ ಮುಖ್ಯಸ್ಥರಾದ ಶ್ರೀ ಮಹೇಶ್ ಕುಮಾರ್ ವಿಭಾಗದ ಕಾರ್ಯ ಯೋಜನೆಗಳ ಪರಿಚಯ ಹಾಗೂ ನೂತನ ಶಿಕ್ಷಣ ನೀತಿಯ ಬಗ್ಗೆ ಮಾಹಿತಿ ನೀಡಿದರು.
ಉಪನ್ಯಾಸಕಿ ನಿರುಷಾ ಎ. ಶೆಟ್ಟಿ ಅವರು ಸ್ವಾಗತಿಸಿ, ಉಪನ್ಯಾಸಕಿ ರಕ್ಷಿತ ಶೆಟ್ಟಿ ವಂದಿಸಿದರು. ಉಪನ್ಯಾಸಕಿ ದೀಪ್ತಿ ಕೆ.ಜಿ. ನಿರೂಪಿಸಿದರು.
ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಚಟುವಟಿಕೆಗಳನ್ನು ಆಯೋಜಿಸಿದರು.











