ಬೈಂದೂರು: ಮೀನುಗಾರಿಕೆಗೆ ಸೀಮೆಎಣ್ಣೆ ಬಿಡುಗಡೆಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ

0
390

Click Here

Click Here

ಕುಂದಾಪುರ ಮಿರರ್ ಸುದ್ದಿ… 

ಬೈಂದೂರು: ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಅವರು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇಲಾಖೆಯ ಜಂಟಿ ಕಾರ್ಯದರ್ಶಿ ನವನೀತ್ ಕೊಠಾರಿ ಅವರನ್ನು ಭೇಟಿ ಮಾಡಿ ಕೇಂದ್ರದಿಂದ ರಾಜ್ಯದ ಕರಾವಳಿ ಜಿಲ್ಲೆಗಳ ಮೀನುಗಾರಿಕೆಗೆ ಸೀಮೆಎಣ್ಣೆಯನ್ನುಶೀಘ್ರ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದರು.

Click Here

ಕೇಂದ್ರ ಸರ್ಕಾರ ಈಗಾಗಲೇ ರಾಜ್ಯಕ್ಕೆ 2472 ಕೆಎಲ್ ಮಂಜೂರಾತಿ ಮಾಡಿದ್ದು ಬಾಕಿ ಉಳಿದಿರುವ 21618 ಕೆಎಲ್ ಸೀಮೆಎಣ್ಣೆಯನ್ನು ಸಹ ಕೂಡಲೇ ಬಿಡುಗಡೆ ಮಾಡಬೇಕೆಂದು ಕೋರಿದರು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಂಟಿ ಕಾರ್ಯದರ್ಶಿಯವರು ಮುಂದಿನ ಒಂದು ವಾರದ ಒಳಗಾಗಿ ಮಂಜೂರಾತಿ ಆದೇಶವನ್ನು ಹೊರಡಿಸುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಂಸದರು ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸಿದರು.

Click Here

LEAVE A REPLY

Please enter your comment!
Please enter your name here