ಕೋಟ ಪಡುಕರೆಯ ಸರಕಾರಿ ಪದವಿ ಕಾಲೇಜಿನಲ್ಲಿ ಕೋಟಿ ಕಂಠ ಗೀತ ಗಾಯನ

0
259

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ ಇಲ್ಲಿ ರಾಷ್ಟ್ರೀಯಸೇವಾ ಯೋಜನೆ ಮತ್ತು ಕಾಲೇಜಿನ ಸಹಭಾಗಿತ್ವದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಇಲ್ಲಿನ ನಿರ್ದೇಶನದಂತೆ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನನ್ನ ನಾಡು ನನ್ನ ಹಾಡು, ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

Click Here

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುನೀತ ವಿ ವಹಿಸಿದರು. ಅವರು ಕನ್ನಡ ನಾಡಿನ ಸಂಸ್ಕೃತಿ ಮತ್ತು ಭಾಷೆ ಇವೆರಡನ್ನು ಜಾಗತೀಕರಣದಿಂದ ಉಳಿಸಿ ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಹೇಳಿದರು. ಕನ್ನಡ ಸಂಸ್ಕೃತಿಯ ಇಲಾಖೆಯ ನಿರ್ದೇಶನದಂತೆ ಪೂರ್ವ ನಿಗದಿತ ಕನ್ನಡದ 6 ಹಾಡುಗಳನ್ನು ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಗಾಯನ ಮಾಡಿದರು. ವೇದಿಕೆಯಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಸಂಚಾಲಕ ಅನಂತ್‍ಕುಮಾರ್ ಸಿ.ಎಸ್ ಈ ಕಾರ್ಯಕ್ರಮವನ್ನು ನಿರ್ವಹಿಸಿದರು.

Click Here

LEAVE A REPLY

Please enter your comment!
Please enter your name here