ಕುಂದಾಪುರ ಮಿರರ್ ಸುದ್ದಿ…
ಕೋಟ: ಸಮಾಜದಲ್ಲಿ ಸಾಮಾಜಿಕ ನ್ಯಾಯ ಹಾಗೂ ಬದ್ಧತೆ,ಕ್ರೀಯಾಶೀಲಯನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಆ ಮೂಲಕ ಸಮಾಜಸೇವೆಗೆ ಹೆಚ್ಚಿನ ಆಯಾಮ ನೀಡಲು ಸಾಧ್ಯ ಎಂದು ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದ್ದಾರೆ.
ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ ಇದರ ನೇತ್ರತ್ವದಲ್ಲಿ ಪಂಚವರ್ಣ ರಾಜ್ಯೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ ಪ್ರತಿಯೊಬ್ಬರು ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು ಬಡವರ ಬಗ್ಗೆ ಕಾಳಜಿ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ ನೆರವು ನೀಡುವ ಕಾರ್ಯಕ್ರಮಗಳನ್ನು ಸದಾ ಹಮ್ಮಿಕೊಳ್ಳಬೇಕು ತನ್ನ ವಯಕ್ತಿಕ ಜೀವನದ ಜಂಜಾಟದ ನಡುವೆ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಬೇಕು ಈ ದಿಸೆಯಲ್ಲಿ ಪಂಚವರ್ಣ ಸಂಘಟನೆಯ ಕಾರ್ಯ ಶ್ಲಾಘನೀಯ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಇದೇ ವೇಳೆ ರಾಜ್ಯೋತ್ಸವ ಆಮಂತ್ರಣವನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು.
ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಮೃತ್ ಜೋಗಿ,ಸ್ಥಾಪಾಕಾಧ್ಯಕ್ಷ ಸುರೇಶ್ ಗಾಣಿಗ, ಕಾರ್ಯದರ್ಶಿ ನಿತೀನ್ ಕುಮಾರ್ ಕೋಟ,ಸಂಚಾಲಕ ಅಜಿತ್ ಆಚಾರ್ಯ, ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್ಯ, ಕೋಶಾಧಿಕಾರಿ ನಾಗರಾಜ್ ಪೂಜಾರಿ, ಪದಾಧಿಕಾರಿಗಳಾದ ಸುರೇಶ್ ಗಿಳಿಯಾರ್, ದಿನೇಶ್ ಪೂಜಾರಿ, ಶಶಿಧರ ತಿಂಗಳಾಯ, ಸಂತೋಷ್ ಸಾಲಿಯಾನ್ , ಸುಬ್ರಹ್ಮಣ್ಯ ಹೇರ್ಳೆ, ಮಹಿಳಾ ಘಟಕದ ಅಧ್ಯಕ್ಷೆ ಕಲಾವತಿ ಆಶೋಕ್, ಕಾರ್ಯದರ್ಶಿ ಲಲಿತಾ ಪೂಜಾರಿ, ಉಪಾಧ್ಯಕ್ಷೆ ವಸಂತಿ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.











