ಕುಂದಾಪುರ ಮಿರರ್ ಸುದ್ದಿ…
ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತ್ರತ್ವದಲ್ಲಿ ನವೆಂಬರ್ 1ರಂದು ಮಂಗಳವಾರ ಕೋಟದ ವರುಣತೀರ್ಥ ಕೆರೆ ಸಮೀಪ ಪಂಚವರ್ಣದ ಕಛೇರಿ ಎದುರು ಪೂರ್ವಾಹ್ನ 9ಗ. ಕನ್ನಡ ಬಾವುಟ ಹಾರಿಸುವ ಮೂಲಕ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದೆ.
ಕೋಟ ಆರಕ್ಷಕ ಠಾಣಾಧಿಕಾರಿ ಮಧು ಬಿ.ಇ ಧ್ವಜಾರೋಹಣ ಗೈಯಲಿದ್ದಾರೆ. ಕೋಟ ಗ್ರಾ.ಪಂ ಅಧ್ಯಕ್ಷ ಅಜಿತ್ ದೇವಾಡಿಗ, ಕೋಟತಟ್ಟು ಗ್ರಾ.ಪಂ ಅಧ್ಯಕ್ಷೆ ಅಶ್ವಿನಿ ದಿನೇಶ್, ಕ.ಸಾ.ಪ ಜಿಲ್ಲಾಧ್ಯಕ್ಷ ನಿಲಾವರ ಸುರೇಂದ್ರ ಅಡಿಗ, ಪರಿಸರವಾದಿ ಕೋ.ಗಿ.ನಾ,ಪಂಚವರ್ಣ ಅಧ್ಯಕ್ಷ ಅಮೃತ್ ಜೋಗಿ, ಸ್ಥಾಪಾಕಾಧ್ಯಕ್ಷ ಸುರೇಶ್ ಗಾಣಿಗ, ಗೌರವಾಧ್ಯಕ್ಷ ಸತೀಶ್ ಹೆಚ್ ಕುಂದರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ, ಗೌರವಾಧ್ಯಕ್ಷೆ ಕುಸುಮಾ ದೇವಾಡಿಗ ಮತ್ತಿತರರು ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ನಂತರ ವಾಹನ ಜಾಥಾ ಕಾರ್ಯಕ್ರಮ ನಡೆಯಲಿದೆ.











