ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: 67ನೇ ಕನ್ನಡ ರಾಜ್ಯೋತ್ಸವದಂದು ವಿವಿಧ ಕ್ಷೇತ್ರದ ಸಾಧಕರಿಗೆ ನೀಡಲಾಗುವ ಪ್ರಶಸ್ತಿಗೆ 67 ಮಂದಿ ಸಾಧಕರು ಹಾಗೂ 10 ಸಂಘ ಸಂಸ್ಥೆಗಳನ್ನು ಸರಕಾರ ಗುರುತಿಸಿದೆ.
ಕುಂದಾಪುರದ ತಾಲೂಕಿನ ಸಮಾಜ ಸೇವಕ ಹಾಗೂ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ, ಯಕ್ಷಗಾನ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣರ, ಯಕ್ಷಗಾನ ತಾಳಮದ್ದಳೆ ಅರ್ಥಧಾರಿ ಡಾ. ಎಂ. ಪ್ರಭಾಕರ ಜೋಶಿ, ಯಕ್ಷಗಾನ ಸ್ತ್ರೀ ಪಾತ್ರಧಾರಿ ಎಂ.ಎ ನಾಯ್ಕ್ ಸೇರಿದಂತೆ ವಿವಿಧ ಸಾಧಕರಿಗೆ ಪ್ರಶಸ್ತಿ ಒಲಿದು ಬಂದಿದೆ.











