ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕುಂದಾಪುರ ಹಾಗೂ ಸರ್ಕಾರಿ ಪ್ರೌಢ ಶಾಲೆ ಕಾಳಾವರ ಇವರ ಸಹಭಾಗಿತ್ವದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಹೆಚ್ಚಿಸಲು ಗಣಿತ ಶಿಕ್ಷಕರ ಒಂದು ದಿನದ ಕಾರ್ಯಾಗಾರ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣಾಧಿಕಾರಿ ಸಿ.ಎಸ್.ಕಾಂತರಾಜು ವಹಿಸಿದ್ದರು. ಶಿಕ್ಷಕರು ಫಲಿತಾಂಶ ಹೆಚ್ಚಿಸಲು ಈಗಾಗಲೇ ತೆಗೆದುಕೊಂಡ ಕ್ರಮಗಳ ಬಗ್ಗೆ ಚರ್ಚಿಸಿ ಪ್ರಶಂಸಿದರು. ಈ ವರ್ಷ ಉತ್ತಮ ಫಲಿತಾಂಶ ಪಡೆಯುವಲ್ಲಿ ಅನುಸರಿಸಬಹುದಾದ ತಂತ್ರಗಳ ಬಗ್ಗೆ ಮಾಹಿತಿ ನೀಡಿದರು. ಪ್ರೌಢಶಾಲಾ ಶಿಕ್ಷಕರ ಸಂಘದ ಕುಂದಾಪುರ ತಾಲೂಕಿನ ಅಧ್ಯಕ್ಷ ಉದಯಕುಮಾರ್ ಶೆಟ್ಟಿಯವರು ಕಾರ್ಯಾಗಾರ ಏರ್ಪಡಿಸಿದ್ದಕ್ಕೆ ಶಿಕ್ಷಣಾಧಿಕಾರಿಗಳನ್ನು ಅಭಿನಂದಿಸಿದರು.
ಶಿಕ್ಷಣ ಸಂಯೋಜಕ ಸಂತೋಷ್ ಹಾಗೂ ಸಂಪನ್ಮೂಲ ವ್ಯಕ್ತಿ ಬಾಬು ಶೆಟ್ಟಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಶ್ರೀಮತಿ ಗಾಯತ್ರಿ ಅಡಿಗರವರು ಸ್ವಾಗತಿಸಿದರು. ಶಿಕ್ಷಕ ಗಣೇಶ ಶೆಟ್ಟಿಗಾರ್ ವಂದನಾರ್ಪಣೆಗೈದರು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಗಣೇಶ್ ಶೆಟ್ಟಿಗಾರ್ ಮತ್ತು ಬಾಬು ಶೆಟ್ಟಿಯವರು ಕಾರ್ಯಾಗಾರವನ್ನು ಯಶಸ್ವಿಗೊಳಿಸಿದರು. ಕಾರ್ಯಾಗಾರದ ಉಸ್ತುವಾರಿ ಶಿಕ್ಷಣ ಸಂಯೋಜಕ ಸಂತೋಷ್ ವಹಿಸಿದ್ದರು.











