ಕುಂದಾಪುರ ಮಿರರ್ ಸುದ್ದಿ…
ಹೆಮ್ಮಾಡಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ತಾಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ, ವಕೀಲರ ಸಂಘ(ರಿ)ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ, ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ಮೂಲಕ ನಾಗರಿಕರ ಸಬಲೀಕರಣ ಈ ಕುರಿತು ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ವಹಿಸಿದ್ದರು.
ಸಮಾರಂಭವನ್ನು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ರಾಜು ಎನ್.ಇವರು ಉದ್ಘಾಟಿಸಿ ಶುಭ ಕೋರಿದರು.
ಸಂಪನ್ಮೂಲ ವ್ಯಕ್ತಿಯಾಗಿ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಇವರು “ಸಾಮಾನ್ಯ ಕಾನೂನು” ಕುರಿತು ಉಪನ್ಯಾಸ ನೀಡಿದರು.
ಸಮಾರಂಭದಲ್ಲಿ ಗೌರವಾನ್ವಿತ ಪ್ರಧಾನ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ(JMFC) ನ್ಯಾಯಾಧೀಶರು ಹಾಗೂ ಕುಂದಾಪುರ ತಾಲೂಕು ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿಯಾಗಿರುವ ಧನೇಶ್ ಮುಗಳಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಶ್ರೀನಾಥ್ ರಾವ್, ಕಂಡ್ಲೂರು ಠಾಣೆಯ ಠಾಣಾಧಿಕಾರಿ ಪವನ್ ನಾಯಕ್, ಕಾಲೇಜಿನ ಉಪಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಾಣಿಜ್ಯ ಉಪನ್ಯಾಸಕರಾದ ಹರ್ಷ ಶೆಟ್ಟಿ ಸ್ವಾಗತಿಸಿ, ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ,ವಾಣಿಜ್ಯ ಉಪನ್ಯಾಸಕರಾದ ಅಭಿಜಿತ್ ವಂದಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು.











